ಬೆಂಗಳೂರು: ರಾಜ್ಯದ ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಆರ್ಭಡಿಸುತ್ತಿದೆ. ಇದೇ ಕಾರಣಕ್ಕಾಗಿ ಸರ್ಕಾರ ಹೊಸ ವ್ಯಾಕ್ಸಿನ್ ಕಂಡು ಹಿಡಿಯೋದಕ್ಕೆ ಐಸಿಎಂಆರ್ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಇದರ ನಡುವೆ ಮಂಗನ ಕಾಯಿಲೆ ಪೀಡಿತರಿಗೆ ಗುಡ್ ನ್ಯೂಸ್ ಎನ್ನುವಂತೆ ಆಯುಷ್ಮಾನ್ ಕಾರ್ಡ್ ಅಡಿಯಲ್ಲಿ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗಿದೆ.
ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದು, ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮಂಗನ ಕಾಯಿಲೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆ.ಎಫ್.ಡಿ ಪಾಸಿಟಿವ್ ಬಂದವರನ್ನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಾಗಿ ಘೋಷಿಸಿ : ಚಾಣಕ್ಯನಿಗೆ ಟಗರು ಸವಾಲ್