ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವೇತನ ಪಾವತಿಯು ಎನ್ ಹೆಚ್ ಎಂ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರಿಗೆ, ಆಶಾ ಕಾರ್ಯಕರ್ತೆಯರಿಗೆ ವಿಳಂಬಗೊಂಡಿತ್ತು. ಇದೀಗ ತಾಂತ್ರಿಕ ಸಮಸ್ಯೆಯಿಂದ ಉಂಟಾದಂತ ತೊಂದರೆ ನಿವಾರಿಸಿ, ಶೀಘ್ರವೇ ಬಾಕಿ ವೇತನ ಪಾವತಿಸುವುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ.
ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನ(NHM), ಕರ್ನಾಟಕದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಪ್ಪಂದಾಧಾರಿತ ನೌಕರರು ಹಾಗೂ ASHA ಕಾರ್ಯಕರ್ತರಿಗೆ 2025ರ ನವೆಂಬರ್ ಮತ್ತು ಡಿಸೆಂಬರ್ ತಿಂಗಳ ವೇತನ ಮತ್ತು ಪ್ರೋತ್ಸಾಹಧನ ಪಾವತಿಯಲ್ಲಿ ಸಂಭವಿಸಿದ ವಿಳಂಬದ ಕುರಿತು ಈ ಮೂಲಕ ಸ್ಪಷ್ಟನೆ ನೀಡಲಾಗುತ್ತಿದೆ ಎಂದಿದೆ.
ಭಾರತ ಸರ್ಕಾರದ ಮಾರ್ಗಸೂಚಿಗಳಂತೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯನ್ನು ಆರ್ಥಿಕ ವರ್ಷದ ಮಧ್ಯಭಾಗದಲ್ಲಿ SNA-SPARSH ಎಂಬ ಹೊಸ ಹಣಕಾಸು ವ್ಯವಸ್ಥೆಗೆ ವರ್ಗಾಯಿಸಲಾಗಿದೆ. ಹಿಂದಿನ ವ್ಯವಸ್ಥೆಯಿಂದ ಹೊಸ ವ್ಯವಸ್ಥೆಗೆ ವರ್ಗಾವಣೆಯಾಗುವ ಸಂದರ್ಭದಲ್ಲಿ, ಕೇಂದ್ರ ಮತ್ತು ರಾಜ್ಯ ಮಟ್ಟಗಳಲ್ಲಿ ನಿಧಿ ಬಿಡುಗಡೆ ಹಾಗೂ ಪಾವತಿ ಪ್ರಕ್ರಿಯೆಗಳಲ್ಲಿ ತಾಂತ್ರಿಕ ಮತ್ತು ಪ್ರಕ್ರಿಯಾತ್ಮಕ ಬದಲಾವಣೆಗಳು ಅಗತ್ಯವಾಗಿದ್ದು, ಇದರಿಂದಾಗಿ ಕೆಲ ತಾತ್ಕಾಲಿಕ ವಿಳಂಬಗಳು ಉಂಟಾಗಿವೆ ಎಂಬುದಾಗಿ ತಿಳಿಸಿದೆ.
SNA-SPARSH ವ್ಯವಸ್ಥೆಯ ಅಡಿಯಲ್ಲಿ, ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾದ ನಂತರ ಮಾತ್ರ ರಾಜ್ಯ ಸರ್ಕಾರವು ಪಾವತಿಗಳನ್ನು ಪ್ರಕ್ರಿಯೆಗೊಳಿಸಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ, ಕೇಂದ್ರ ಪಾಲಿನ ನಿಧಿಗಳ ಸ್ವೀಕೃತಿಯಲ್ಲಿ ಉಂಟಾದ ವಿಳಂಬ ಮತ್ತು ಹೊಸ ವ್ಯವಸ್ಥೆಗೆ ಹೊಂದಾಣಿಕೆಯ ಪ್ರಕ್ರಿಯೆಗಳ ಕಾರಣದಿಂದಾಗಿ, NHM ನೌಕರರಿಗೆ ವೇತನ ಪಾವತಿ ನಿರ್ಧಿಷ್ಟ ಸಮಯಕ್ಕೆ ಸಾಧ್ಯವಾಗಲಿಲ್ಲ ಎಂದು ಹೇಳಿದೆ.
ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದಿನಾಂಕ 08.01.2026 ರಂದು 7175.75 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಸಂಬಂಧಿತ ಕೇಂದ್ರ ಹಾಗೂ ರಾಜ್ಯ ಪಾಲಿನ ನಿಧಿಗಳು ಪ್ರಸ್ತುತ ರಾಜ್ಯ ಸರ್ಕಾರದ ಮಟ್ಟದಲ್ಲಿ ಪ್ರಕ್ರಿಯೆಯಲ್ಲಿದ್ದು, ಶೀಘ್ರದಲ್ಲೇ ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗುವುದು ಎಂಬುದಾಗಿ ತಿಳಿಸಿದೆ.
NHM ನೌಕರರ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ದಿನಗಳಿಂದ ಕೇಂದ್ರ ಅನುದಾನಗಳ ಸಮಯವನ್ನು ಪರಿಗಣಿಸದೆ, ವೇತನ ಪಾವತಿಯನ್ನು ಆದ್ಯತೆಯ ಮೇರೆಗೆ ಶೀಘ್ರವಾಗಿ ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ ಎಂಬುದಾಗಿ ತಿಳಿಸುವ ಮೂಲಕ ಗುಡ್ ನ್ಯೂಸ್ ನೀಡಿದೆ.
ಇನ್ನೂ ರಾಜ್ಯ ಸರ್ಕಾರವು ಈ ವಿಷಯವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಯಾವುದೇ ವಿಳಂಬವಾಗದಂತೆ ಹಣಕಾಸು ಪ್ರಕ್ರಿಯೆಯನ್ನು ಸರಳಗೊಳಿಸಿ ನಿಧಿಗಳ ಸುಗಮ ಹರಿವು ಖಚಿತಪಡಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು..
BREAKING: ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ‘ಗ್ರಾಮ ಪಂಚಾಯಿತಿ’ಗಳಿಗೆ ‘ಆಡಳಿತಾಧಿಕಾರಿ’ ನೇಮಿಸಿ ಸರ್ಕಾರ ಆದೇಶ
ಜಿ ರಾಮ್ ಜಿ ಕಾಯ್ದೆ : ನ್ಯಾಯ ಸಿಗವವರೆಗೂ ಹೋರಾಟ ನಿಲ್ಲಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್
SHOCKING: ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಪಾಪಿ ಅಣ್ಣ.!








