ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 2 ಡಿ ಮೀಸಲಾತಿ ನೀಡಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಇಂದು ನಡೆದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2ಡಿ ಮೀಸಲಾತಿ ನೀಡುವುದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಪಂಚಮಸಾಲಿ ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.
ಪಂಚಮಸಾಲಿ ಮೀಸಲಾತಿ’ ಗೆ ಒತ್ತಾಯಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಭಾರೀ ಪ್ರತಿಭಟನೆ ನಡೆಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟವಾಗಿದೆ.