ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಸಮುದಾಯದಿಂದ ಹೋರಾಟ ನಡೆಸಲಾಗುತ್ತಿದೆ. ನಾಳೆಯೊಳಗೆ ಘೋಷಣೆಗೂ ಒತ್ತಾಯ ಕೇಳಿ ಬಂದಿದೆ. ಈ ಬೆನ್ನಲ್ಲೇ, ನಾಳೆ ಪಂಚಮಸಾಲಿ ಸಮುದಾಯಕ್ಕೆ ಗುಡ್ ನ್ಯೂಸ್ ಸಿಗಲಿದೆ. ಸಿಎಂ ಬೊಮ್ಮಾಯಿಯವರು ಮೀಸಲಾತಿ ಘೋಷಣೆ ಮಾಡಲಿದ್ದಾರೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
BIG NEWS: ರಾಜ್ಯದಲ್ಲಿ ಮತ್ತೆ ಬಹುಮತದಿಂದ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತೆ – ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾಳೆಯೇ ಸಿಎಂ ಬಸವರಾಜ ಬೊಮ್ಮಾಯಿಯವರು ಐತಿಹಾಸಿಕ ನಿರ್ಣಯವನ್ನು ಕೈಗೊಳ್ಳಲಿದ್ದಾರೆ. ಮೀಸಲಾತಿ ನಾಳೆ ಘೋಷಣೆಯಾಗುವ ಮೂಲಕ, ಪಂಚಮಸಾಲಿ ಸಮುದಾಯವನ್ನು 2ಎ ಸೇರ್ಪಡೆಯ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂಬುದಾಗಿ ಹೇಳಿದರು.
BREAING NEWS : ವಿಧಾನ ಪರಿಷತ್ ಸಭಾಪತಿಯಾಗಿ `ಬಸವರಾಜ ಹೊರಟ್ಟಿ’ ಅವಿರೋಧ ಆಯ್ಕೆ : ಅಧಿಕೃತ ಘೋಷಣೆಯೊಂದೇ ಬಾಕಿ
ಮತ್ತೊಂದೆಡೆ ಮಾತನಾಡಿದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಎಲ್ಲಾ ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತದೆ. ಬಗೆಹರಿಸುತ್ತೇವೆ. ಸರ್ಕಾರ ಈ ಬಗ್ಗೆ ಗಮನಹರಿಸಲಿ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರ್ಪಡೆಗೊಳಿಸುವಂತ ಮೀಸಲಾತಿ ಸುಳಿವನ್ನು ನೀಡಿದ್ದಾರೆ.