ಬೆಂಗಳೂರು; ರಾಜ್ಯದ ಶಾಲಾ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಮುಂದಿನ ವರ್ಷದ ವೇಳೆಗೆ ರಾಜ್ಯಾಧ್ಯಂತ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯಲಾಗಿದೆ. 1,008 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ ಎಂದಿದ್ದಾರೆ.
ಮುಂದಿನ ವರ್ಷದ ವೇಳೆಗೆ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು. ನಾಲ್ಕು ವರ್ಷಗಳಲ್ಲಿ ಹಂತ ಹಂತವಾಗಿ ಇಂತಹ 3 ಸಾವಿರ ಶಾಲೆ ತೆರೆಯಲು ಉದ್ದೇಶಿಸಲಾಗಿದೆ. ಇದರಿಂದ 45 ಲಕ್ಷ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯಲಾಗಿದೆ. 1,008 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಮುಂದಿನ ವರ್ಷದ ವೇಳೆಗೆ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು. ನಾಲ್ಕು ವರ್ಷಗಳಲ್ಲಿ ಹಂತ ಹಂತವಾಗಿ ಇಂತಹ 3 ಸಾವಿರ ಶಾಲೆ ತೆರೆಯಲು ಉದ್ದೇಶಿಸಲಾಗಿದೆ. ಇದರಿಂದ 45 ಲಕ್ಷ ಮಕ್ಕಳಿಗೆ… pic.twitter.com/cjmTBBVeDv
— DIPR Karnataka (@KarnatakaVarthe) August 13, 2024