ಬೆಂಗಳೂರು: ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ವಿಶೇಷ (ರೈಲು ಸಂಖ್ಯೆ 07339/07340) ರೈಲುಗಳ ಅವಧಿಯನ್ನು ಈಗಿರುವ ನಿಲುಗಡೆ ಮತ್ತು ಸಮಯದೊಂದಿಗೆ ವಿಸ್ತರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ವಿವರಗಳು ಈ ಕೆಳಗಿನಂತಿವೆ:
1. ರೈಲು ಸಂಖ್ಯೆ 07339 ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ಬೆಂಗಳೂರು ಡೈಲಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ವಿಶೇಷ ರೈಲು ಸೇವೆ ಈ ಮೊದಲು ಡಿಸೆಂಬರ್ 31, 2024 ರವರೆಗೆ ಓಡಿಸಲು ನಿಗದಿಪಡಿಸಲಾಗಿತ್ತು. ಈಗ ಜನವರಿ 1, 2025 ರಿಂದ ಜೂನ್ 30, 2025 ರವರೆಗೆ ವಿಸ್ತರಿಸಲಾಗಿದೆ.
2. ರೈಲು ಸಂಖ್ಯೆ 07340 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ವಿಶೇಷ ರೈಲು ಸೇವೆ ಈ ಮೊದಲು ಜನವರಿ 1, 2025 ರವರೆಗೆ ಸಂಚರಿಸಲು ನಿಗದಿಪಡಿಸಲಾಗಿತ್ತು, ಈಗ ಜನವರಿ 2, 2025 ರಿಂದ ಜುಲೈ 1, 2025 ರವರೆಗೆ ವಿಸ್ತರಿಸಲಾಗಿದೆ.
ಗ್ಯಾರಂಟಿಗಳನ್ನು ನಿಲ್ಸಲ್ಲ, ನಿಲ್ಸಲ್ಲ, ನಿಲ್ಸಲ್ಲ: ಸಿಎಂ ಸಿದ್ಧರಾಮಯ್ಯ ಘೋಷಣೆ
BIG NEWS : ಸೈಬರ್ ವಂಚನೆ ತಡೆಗೆ `TRAI’ನಿಂದ ಮಹತ್ವದ ಕ್ರಮ : ದೇಶಾದ್ಯಂತ 18 ಲಕ್ಷ ಮೊಬೈಲ್ ಸಂಖ್ಯೆ ನಿರ್ಬಂಧ!