ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1) ಮತ್ತು (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡುವಂತೆ ಸರ್ಕಾರ ಆದೇಶಿಸಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪಿಡಿಓಗಳಿಗೆ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಪ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ (ಗ್ರಾ.ಪಂ) ಅವರು ನಡವಳಿಯನ್ನು ಹೊರಡಿಸಿದ್ದು, 2024-25 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ:237 ರ ಉಪ ಕ್ರಮ ಸಂಖ್ಯೆ: 01 ರಲ್ಲಿ, ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಎಂದು ಘೋಷಿಸಲಾಗಿದೆ ಎಂದಿದ್ದಾರೆ.
ಅದರಂತೆ, ಗ್ರಾಮ ಪಂಚಾಯಿತಿಗಳ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್- 1) ಮತ್ತು (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು 2024-25ನೇ ಸಾಲಿನಿಂದ ಕೌನ್ಸಿಲಿಂಗ್ ಮೂಲಕ ಮಾಡಲು ಸರ್ಕಾರವು ನಿರ್ಧರಿಸಿದೆ. ಅದರಂತೆ, ಈ ಕೆಳಕಂಡ ಆದೇಶ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಗ್ರಾಮ ಪಂಚಾಯಿತಿಗಳ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1) ಮತ್ತು (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು 2024-25ನೇ ಸಾಲಿನಿಂದ ಕೌನ್ಸಿಲಿಂಗ್ ಮೂಲಕ ಮಾಡಲು ಸರ್ಕಾರವು ಆದೇಶಿಸಿದ್ದಾರೆ.
ಈ ಆದೇಶವನ್ನು ಆರ್ಥಿಕ ಇಲಾಖೆಯು ಟಿಪ್ಪಣಿ ಸಂಖ್ಯೆ:ಆಇ221 ವೆಚ್ಚ-6/2024 ದಿನಾಂಕ: 28-05- 2024 ರಲ್ಲಿ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯು ಟಿಪ್ಪಣಿ ಸಂಖ್ಯೆ:PDS-DPD/27/2024, ದಿನಾಂಕ:24-05-2024 ರಂದು ನೀಡಿರುವ ಸಹಮತಿಯನ್ವಯ ಹೊರಡಿಸಿದ್ದಾರೆ.
‘ನಟ ದರ್ಶನ್ ಅಭಿಮಾನಿ’ಗಳೇ ಇಲ್ಲಿ ಕೇಳಿ: ‘ಪತ್ನಿ ವಿಜಯಲಕ್ಷ್ಮಿ’ ಈ ವಿಶೇಷ ಮನವಿ | Actor Darshan
ವಿದ್ಯಾರ್ಥಿಗಳೇ ಗಮನಿಸಿ: ಜುಲೈ.13, 14ರಂದು ನಿಗದಿ ಪಡಿಸಿದ್ದ ‘PG CET-2024ರ ಪರೀಕ್ಷೆ’ ಮುಂದೂಡಿಕೆ