ಸುಭಾಷಿತ :

Monday, February 24 , 2020 1:32 AM

ಮಾಸಾಶನ ಫಲಾನುಭವಿಗಳಿಗೆ `ಶುಭಸುದ್ದಿ’ : ಮನೆ ಬಾಗಿಲಿಗೆ ಬರಲಿದೆ ಪಿಂಚಣಿ


Monday, January 20th, 2020 6:28 am

ಬೆಂಗಳೂರು : ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದ್ದು, ಇನ್ಮುಂದೆ ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿಗೆ ಅರ್ಜಿ ಹಾಕದಿದ್ದರೂ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ರೂಪಿಸಲು ಸರ್ಕಾರ ಸಿದ್ಧತೆ ನಡೆಸಿದೆ.

ಈಗಾಗಲೇ ಪ್ರಾಯೋಗಿಕವಾಗಿ ಉಡುಪಿ ಜಿಲ್ಲೆಯಲ್ಲಿ ಈ ಯೋಜನೆ ಜಾರಿಗೆ ತರಲಾಗಿದ್ದು, ಶೀಘ್ರವೇ ರಾಜ್ಯಾದ್ಯಂತ ವಿಸ್ತರಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ ಎನ್ನಲಾಗಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿಗೆ ಅರ್ಜಿ ಸಲ್ಲಿಸಲು ಅಧಿಕಾರಿಗಳು ಮನೆ ಬಾಗಿಲಿಗೆ ಬರಲಿದ್ದಾರೆ.

ವಿಧವರೆಯರು, ವಿಚ್ಛೇದಿತ ಮಹಿಳೆಯರು, ಹಿರಿಯ ನಾಗರೀಕರು, ವಿಕಲಚೇತನರು, ಲೈಂಗಿಕ ಅಲ್ಪಸಂಖ್ಯಾತರು ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುವ ಫಲಾನುಭವಿಗಳ ಮನೆ ಬಾಗಿಲಿಗೆ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions