ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಲಾಲ್ ಬಾಗ್ ನಲ್ಲಿ ಫಲ-ಪುಷ್ಪ ಪ್ರದರ್ಶನ ನಡೆಯುತ್ತಿದೆ. ಈ ಲಾಲ್ ಬಾಗ್ ಫ್ಲವರ್ ಶೋ ಗೆ ( Flower Show ) ತೆರಳುವಂತ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪೇಪರ್ ಟಿಕೆಟ್ ನೀಡಲಿದೆ. ಈ ಮೂಲಕ ಪ್ಲವರ್ ಶೋಗೆ ತೆರಳುವಂತ ಜನರಿಗೆ ಗುಡ್ ನ್ಯೂಸ್ ನೀಡಿದೆ.
ಶಿವಮೊಗ್ಗ: ಮೆಕ್ಕೆಜೋಳ ಬೆಳೆ ಹಾನಿ: ವೈಯಕ್ತಿಕ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಡಿಸಿ ಸೂಚನೆ
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನದ ಪ್ರಯುಕ್ತ ಲಾಲ್ ಬಾಗ್ ಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋದಲ್ಲಿ ದಿನಾಂಕ 13-08-2022ರ ಶನಿವಾರದಿಂದ 15-08-2022ರ ಸೋಮವಾರದವರೆಗೆ ಮೂರು ದಿನ ರಿಚರ್ನ್ ಜರ್ನಿಗಾಗಿ ಪೇಪರ್ ಟಿಕೆಟ್ ಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದೆ.
ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಾಲ್ ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು ರೂ.30ಕ್ಕೆ ನಿಗದಿಪಡಿಸಲಾಗಿದೆ. ಈ ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ ಲಾಲ್ ಬಾಗ್ ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಮಾನ್ಯವಾಗಿರುತ್ತದೆ ಎಂದಿದ್ದಾರೆ.
ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಈ ದಿನಾಂಕಗಳಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೇಪರ್ ಟಿಕೆಟ್ ಗಳನ್ನು ಖರೀದಿಸಬಹುದಾಗಿದೆ. ಲಾಲ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್ ರಾತ್ರಿ 8 ಗಂಟೆಯವರೆಗೆ ಲಭ್ಯವಿರುತ್ತದೆ ಎಂದು ಹೇಳಿದೆ.
ಯಾವುದೇ ನಿಲ್ದಾಣದಿಂದ ಲಾಲ್ ಬಾಗ್ ನಿಲ್ದಾಣಕ್ಕೆ ಪ್ರಯಾಣಿಸಲು ಚಾಲ್ತಿಯಲ್ಲಿ ಇರುವ ದರದಲ್ಲಿ ಟೋಕನ್ ಮತ್ತು ಸ್ಮಾರ್ಟ್ ಕಾರ್ಡ್ ಗಳ್ನು ಬಳಸಿ ಪ್ರಯಾಣಿಸಬೇಕಾಗುತ್ತದೆ. ಸ್ಮಾರ್ಟ್ ಕಾರ್ಡ್ ಪ್ರಯಾಣಕ್ಕೆ ಚಾಲ್ತಿಯಲ್ಲಿರುವ ರಿಯಾಯಿತಿ ದರವು ಅನ್ವಯವಾಗಲಿದೆ ಎಂದು ತಿಳಿಸಿದೆ.