ಬೆಂಗಳೂರು: ಬಿಬಿಎಂಪಿ ( BBMP ) ವ್ಯಾಪ್ತಿಯಲ್ಲಿ ಬರುವ ಉದ್ಯಾನವನಗಳನ್ನು ಬೆಳಗ್ಗೆ 5 ರಿಂದ ರಾತ್ರಿ 8 ರ ವರೆಗೆ ಸಾರ್ವಜನಿಕರ ಉಪಯೋಗಕ್ಕೆ ಅವಕಾಶ ಮಾಡಿಕೊಡಲು ಬಿಬಿಎಂಪಿ ಆದೇಶಿಸಿದೆ.
ಈ ಸಂಬಂಧ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ( BBMP Chief Commissioner Tushar Girinath ) ಅವರು, ಸುತ್ತೋಲೆ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಉದ್ಯಾನವನಗಳನ್ನು ವಾಯು ವಿಹಾರಕ್ಕೆಂದು ಪ್ರತಿ ದಿನ ಬೆಳಗ್ಗೆ 5.00 ರಿಂದ 10.00 ರವರೆಗೆ ಹಾಗೂ ಸಂಜೆ 4.00 ರಿಂದ ರಾತ್ರಿ 8.00 ರವರೆಗೆ ಸಾರ್ವಜನಿಕರ ಉಪಯೋಗಕ್ಕಾಗಿ ಅವಕಾಶ ಕಲ್ಪಿಸಲಾಗಿತ್ತು ಎಂದಿದ್ದಾರೆ.
ಇನ್ನು ಮುಂದೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲೆಂದು ಸಮಯವನ್ನು ಮಾರ್ಪಡಿಸಿ ಬೆಳಗ್ಗೆ 5.00 ರಿಂದ ರಾತ್ರಿ 8.00 ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಉದ್ಯಾನವನಗಳ ನಿರ್ವಹಣೆಗಾಗಿ ಬೆಳಗ್ಗೆ 10 ರಿಂದ ಮದ್ಯಾಹ್ನ 1.30 ರವರೆಗೆ ಸಮಯವನ್ನು ನಿಗಧಿಪಡಿಸಿ ಆದೇಶಿಸಲಾಗಿದೆ. ಉದ್ಯಾನವನಗಳ ನಿರ್ವಹಣೆಯ ಸಮಯದಲ್ಲಿ ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ ಎಂದು ಸೊತ್ತೋಲೆಯಲ್ಲಿ ತಿಳಿಸಿದ್ದಾರೆ.