ಬೆಂಗಳೂರು : ಕರ್ನಾಟಕ ರಾಜ್ಯದ 10 ಮಹಾನಗರ ಪಾಲಿಕೆಗಳ ಖಾಯಂ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿಯ ಸೌಲಭ್ಯವನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೇಲೆ ಕ್ರಮ ಸಂಖ್ಯೆ (1) ರಲ್ಲಿ ಓದಲಾದ ದಿನಾಂಕ: 09.07.2018ರ ಆದೇಶದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯನ್ನು ಪರಿಷ್ಕರಿಸಿದ ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 06 ಎಸ್‌ಆರ್‌ಪಿ 2018, ದಿನಾಂಕ: 01.03.2018 ಮತ್ತು ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 06 ಎಸ್‌ಆರ್‌ಪಿ 2018, ದಿನಾಂಕ: 19.04.2018 ರಲ್ಲಿನ ನಿರ್ದೇಶನದಂತೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ / ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿ ಸೌಲಭ್ಯವನ್ನು ದಿನಾಂಕ: 01.07.2017 ರಿಂದ ಜಾರಿಗೆ ಬರುವಂತೆ ಮಂಜೂರು ಮಾಡಲಾಗಿದೆ. ಆದರೆ, ವೇತನ ಪರಿಷ್ಕರಣೆಯ ಆರ್ಥಿಕ ಸೌಲಭ್ಯವು ದಿನಾಂಕ: 01.04.2018 ರಿಂದ ಜಾರಿಗೆ ಬರುವಂತೆ ಯಥಾವತ್ತಾಗಿ ವಿಸ್ತರಿಸಿ ಆದೇಶಿಸಲಾಗಿರುತ್ತದೆ.
ಮೇಲೆ ಕ್ರಮ ಸಂಖ್ಯೆ (2) ರಲ್ಲಿ ಓದಲಾದ ದಿನಾಂಕ: 22.07.2024ರ ಆದೇಶದಲ್ಲಿ, 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅಂಗೀಕರಿಸಿ, ಅದರಂತೆ ರಾಜ್ಯ ಸರ್ಕಾರಿ ನೌಕರರ ಮುಖ್ಯವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಹಾಗೂ ಪಿಂಚಣಿಯನ್ನು ದಿನಾಂಕ: 01.07.2022 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲು ಆದೇಶ ಹೊರಡಿಸಲಾಗಿರುತ್ತದೆ. ಈ ಆದೇಶದ ಕಂಡಿಕೆ (8) ರಲ್ಲಿ ಅನ್ವಯಿಸುವ ಬದಲಾವಣೆಗಳೊಂದಿಗೆ ಈ ಮೇಲಿನ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಭೋದಕೇತರ ಸಿಬ್ಬಂದಿಗಳಿಗೂ ಸಹಾ ಯಥಾವತ್ತಾಗಿ ವಿಸ್ತರಿಸಿ ಆದೇಶಿಸಲಾಗಿರುತ್ತದೆ.
ಮೇಲೆ ಕ್ರಮ ಸಂಖ್ಯೆ (3) ರಲ್ಲಿ ಓದಲಾದ ದಿನಾಂಕ: 17.08.2024ರ ಅಧಿಸೂಚನೆಯಲ್ಲಿ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳು 2024ನ್ನು ರಚಿಸಲಾಗಿರುತ್ತದೆ.
ಮೇಲೆ ಕ್ರಮ ಸಂಖ್ಯೆ (4) ರಲ್ಲಿ ಓದಲಾದ ದಿನಾಂಕ: 23.08.2024ರ ಆದೇಶದಲ್ಲಿನ ಕಂಡಿಕೆ 11.1 ರಲ್ಲಿ ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ಮತ್ತು ವಿಶ್ವವಿದ್ಯಾಲಯಗಳ ಭೋದಕೇತರ ಸಿಬ್ಬಂದಿಗಳಿಗೂ ಸಹಾ ವಿಸ್ತರಿಸಲಾಗಿರುತ್ತದೆ. ಈ ಕುರಿತಂತೆ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಪ್ರತ್ಯೇಕವಾಗಿ ಹೊರಡಿಸುತ್ತವೆ ಎಂದು ತಿಳಿಸಲಾಗಿರುತ್ತದೆ.
ಮೇಲೆ ಕ್ರಮ ಸಂಖ್ಯೆ (5) ರಲ್ಲಿ ಓದಲಾದ ದಿನಾಂಕ: 02.09.2024ರ ಪತ್ರದಲ್ಲಿ ಜಂಟಿ ನಿರ್ದೇಶಕರು (ಹಣಕಾಸು), ಪೌರಾಡಳಿತ ನಿರ್ದೇಶನಾಲಯ ರವರು, ಆರ್ಥಿಕ ಇಲಾಖೆಯ ಆದೇಶ ಸಂಖ್ಯೆ: ಆಇ 21 ಎಸ್‌ಆರ್‌ಪಿ 2024, ದಿನಾಂಕ: 22.07.2024 ರ ಆದೇಶದಲ್ಲಿ, 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿಗಳನ್ನು ಅಂಗೀಕರಿಸಿ, ಕಂಡಿಕೆ (8) ರಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳಿಗೆ ಈ ಸೌಲಭ್ಯವನ್ನು ಯಥಾವತ್ತಾಗಿ ವಿಸ್ತರಿಸಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿರುತ್ತಾರೆ .