ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಆಫ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ (ದಿನಾಂಕ:10-01-2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿಹೆಚ್.ಡಿ. ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳು ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿ ಸಲ್ಲಿಸಬಹುದು.
ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳಲ್ಲಿ ಹಾಗೂ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜ.20 ಕೊನೆಯ ದಿನವಾಗಿರುತ್ತದೆ. ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnatakaka.gov.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿ, ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ.8050770004 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯಾಂಕಿಂಗ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ತರಬೇತಿಗೆ ಅರ್ಜಿ ಆಹ್ವಾನ