ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಈಗಾಗಲೇ ದೈಹಿಕ ಶಿಕ್ಷಕರನ್ನು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ( Goverment Primary and High School ) ಮುಖ್ಯ ಶಿಕ್ಷಕರ ಹುದ್ದೆಗೆ ಅಧಿಕ ಪ್ರಭಾರದಲ್ಲಿ ಇರಿಸಬಹುದು ಎಂಬುದಾಗಿ ಆದೇಶಿಸಲಾಗಿತ್ತು. ಈ ಮೂಲಕ ಗುಡ್ ನ್ಯೂಸ್ ನೀಡಲಾಗಿತ್ತು. ಈ ಆದೇಶವನ್ನು ಮಾರ್ಪಡಿಸುವಂತೆ ಕೋರಿದ್ದಂತ ಮನವಿಯನ್ನು ಸರ್ಕಾರ ತಿರಸ್ಕರಿಸಿದೆ. ಈ ಮೂಲಕ ಮತ್ತೆ ದೈಹಿಕ ಶಿಕ್ಷಣ ಶಿಕ್ಷಕರಿಗೆ ( Physical Education Teachers ) ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ದೈಹಿಕ ಶಿಕ್ಷಕರನ್ನು ಮುಖ್ಯ ಶಿಕ್ಷಕರ ಹುದ್ದೆಯಲ್ಲಿ ಅಧಿಕ ಪ್ರಭಾರದಲ್ಲಿ ಇರಿಸುವ ಬಗ್ಗೆ ಆಕ್ಷೇಪಣೆ ಸಲ್ಲಿಸಲಾಗಿತ್ತು. ಅಲ್ಲದೇ ಈ ಆದೇಶವನ್ನು ಮಾರ್ಪಡಿಸುವಂತೆ ಕೋರಲಾಗಿತ್ತು.
BREAKING NEWS: ದಿಢೀರ್ ಸಿಎಂ ಬೊಮ್ಮಾಯಿಯವರ ಇಂದಿನ ಧಾರವಾಡ ಮತ್ತು ನಾಳೆಯ ಹಾವೇರಿ ಜಿಲ್ಲಾ ಪ್ರವಾಸ ರದ್ದು
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ, ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಪತ್ರ ಬರೆದಿದ್ದು, ದೈಹಿಕ ಶಿಕ್ಷಕರನ್ನು ಮುಖ್ಯ ಶಿಕ್ಷಕರ ಹುದ್ದೆಯಲ್ಲಿ ಅಧಿಕ ಪ್ರಭಾರದಲ್ಲಿ ಇರಿಸಲು ಆದೇಶಿಸಿರುವುದನ್ನು ರದ್ದುಪಡಿಸುವಂತೆ ಕೋರಿರುವ ಪ್ರಸ್ತಾವನೆಯನ್ನು ಪುನರ್ ಪರಿಶೀಲಿಸುವ ಅವಶ್ಯಕತೆ ಇರುವುದಿಲ್ಲವೆಂದು ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದೈಹಿಕ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.