ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ನಡೆಯುತ್ತಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಎನ್ನುವಂತೆ ಪೊಲೀಸ್ ಪೇದೆ ಸೇರಿದಂತೆ ವಿವಿಧ 4,115 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ.
ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಗೃಹ ಇಲಾಖೆಯಿಂದ ಅನುಮತಿ ನೀಡಲು ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು. 3,500 ಪೊಲೀಸ್ ಪೇದೆ ಸೇರಿದಂತೆ ಒಟ್ಟು 4,115 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯು ಅನುಮತಿ ನೀಡಿದೆ.
ಈ ಹಿನ್ನಲೆಯಲ್ಲಿ ಶೀಘ್ರವೇ ಪೊಲೀಸ್ ಪೇದೆ, ಪಿಎಸ್ಐ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರ ಬೀಳಲಿದೆ. 4,115 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ರಾಜ್ಯ ಸರ್ಕಾರದಿದಂ ಹೊರಡಿಸಲಾಗುತ್ತದೆ.
ಯಾವ ಯಾವ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ.?
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ / ಡಿಎಆರ್) 2000
ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (SRPC ) (KSRP) -1500
ಪೊಲೀಸ್ ಸಬ್ಇನ್ಸ್ಪೆಕ್ಟರ್-300
ಪೊಲೀಸ್ ಸಬ್ಇನ್ಸ್ಪೆಕ್ಟರ್-300
ಡೆಪ್ಯೂಟಿ ಸಬ್ ಇನ್ಸ್ಪೆಕ್ಟರ್-15