Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ಪ್ರಧಾನಿ ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ” : ತೇಜಸ್ವಿ ಸೂರ್ಯ ಜೊತೆ ‘ನಾರಾಯಣ ಮೂರ್ತಿ’ ಮಾತು

17/07/2025 7:50 AM

ರಾಜ್ಯ ಸರ್ಕಾರದಿಂದ `ಪೊಲೀಸರಿಗೆ ಗುಡ್ ನ್ಯೂಸ್’ : ಟೋಪಿ ಬದಲಿಗೆ ಪಿ ಕ್ಯಾಪ್, ವೈದ್ಯಕೀಯ ತಪಾಸಣಾ ವೆಚ್ಚ 1500 ರೂ.ಗೆ ಹೆಚ್ಚಳ

17/07/2025 7:46 AM

ಕರ್ನಾಟಕದಿಂದ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಸುವ್ಯವಸ್ಥಿತ ವಸತಿ ಗೃಹಗಳ ನಿರ್ಮಾಣಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

17/07/2025 7:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಪೊಲೀಸರಿಗೆ ಗುಡ್ ನ್ಯೂಸ್’ : ಟೋಪಿ ಬದಲಿಗೆ ಪಿ ಕ್ಯಾಪ್, ವೈದ್ಯಕೀಯ ತಪಾಸಣಾ ವೆಚ್ಚ 1500 ರೂ.ಗೆ ಹೆಚ್ಚಳ
KARNATAKA

ರಾಜ್ಯ ಸರ್ಕಾರದಿಂದ `ಪೊಲೀಸರಿಗೆ ಗುಡ್ ನ್ಯೂಸ್’ : ಟೋಪಿ ಬದಲಿಗೆ ಪಿ ಕ್ಯಾಪ್, ವೈದ್ಯಕೀಯ ತಪಾಸಣಾ ವೆಚ್ಚ 1500 ರೂ.ಗೆ ಹೆಚ್ಚಳ

By kannadanewsnow5717/07/2025 7:46 AM

ಬೆಂಗಳೂರು : ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ. ಸಮಾಜದ ಶಾಂತಿ ಸುವ್ಯವಸ್ಥೆ, ಜನರ ಆಸ್ತಿ, ಮಾನ, ಪ್ರಾಣಗಳನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆ ಬಹುಮುಖ್ಯ ಪಾತ್ರ ವಹಿಸುತ್ತದೆ. ಯಾವುದೇ ಪ್ರದೇಶ ಸುರಕ್ಷಿತವಾಗಿದ್ದಲ್ಲಿ, ಅಲ್ಲಿನ ಪೊಲೀಸರ ಶ್ರಮವಿರುತ್ತದೆ. ರಾಜ್ಯದಲ್ಲಿ ಏಳು ಕೋಟಿ ಜನರ ರಕ್ಷಣೆಗೆ ಪೊಲೀಸರು ಬದ್ಧತೆ ತೋರುತ್ತಾರೆ. ರಾಜ್ಯದಲ್ಲಿ 2023ಕ್ಕೆ ಹೋಲಿಸದರೆ 2024 ರಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್ ಜಂಕ್ಷನ್ ಹತ್ತಿರ ನಿರ್ಮಿಸಿರುವ ಕೆಎಸ್‌ಆರ್‌ಪಿ ಸಮುದಾಯ ಭವನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಅಭಿವೃದ್ಧಿಯು , ಪೊಲೀಸರ ಕಾರ್ಯಕ್ಷಮತೆಯ ಮೇಲೆ ಅವಲಂಬಿತವಾಗಿರುತ್ತದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಅಭಿವೃದ್ಧಿಗೆ ನೇರ ಸಂಬಂಧವಿದೆ. ಈ ದಿಸೆಯಲ್ಲಿ ಪೊಲೀಸರು ಶ್ರಮಿಸುತ್ತಿರುವುದು ಅಭಿನಂದನೀಯ.
ರಾಜ್ಯದಲ್ಲಿ ಅಪರಾಧಗಳ ಸಂಖ್ಯೆಯನ್ನು ಮತ್ತಷ್ಟು ಕಡಿಮೆಗೊಳಿಸುವತ್ತ ಪೊಲೀಸರು ಹೆಚ್ಚಿನ ಗಮನ ನೀಡಬೇಕು. ಸಮಾಜದಲ್ಲಿ ಅಶಾಂತಿ, ಹಿಂಸೆ, ಕ್ರೌರ್ಯ, ದ್ವೇಷಪೂರಿತ ಭಾಷಣದಿಂದ ಪ್ರಚೋದನೆಗಳು ಹೆಚ್ಚುತ್ತಿರುವುದನ್ನು ಕಾಣಲಾಗುತ್ತಿದೆ. ಸಮಾಜದಲ್ಲಿ ಶಾಂತಿ ಕದಡುವ ಹಾಗೂ ಹಿಂಸೆ, ದ್ವೇಷವನ್ನು ಪ್ರಚೋದಿಸುವುದನ್ನು ತಡೆದಾಗ ಮಾತ್ರ ಸಮಾಜದ ಒಳಿತು ಸಾಧ್ಯವಾಗುತ್ತದೆ.

ಉತ್ತಮ ಅಧಿಕಾರಿಗಳಿದ್ದಲ್ಲಿ ಅಂತಹ ಕಡೆ ಅಪರಾಧಗಳು ಕಡಿಮೆಯಿರುವುದು ಗಮನಾರ್ಹ. ನಿಷ್ಠಾವಂತ ಅಧಿಕಾರಿಗಳಿಗೆ ಅಪರಾಧ ತಡೆಗಟ್ಟುವುದು ಕಷ್ಟದ ಕೆಲಸವಲ್ಲ.
ಹಿರಿಯ ಅಧಿಕಾರಿಗಳು ಕೆಳ ಮಟ್ಟದ ಪೊಲೀಸ್ ಅಧಿಕಾರಿಗಳ ಜೊತೆಗೆ ಉತ್ತಮವಾದ ಬಾಂಧವ್ಯವನ್ನು ಇಟ್ಟುಕೊಂಡು ಕೆಲಸ ಮಾಡುವುದು ಒಳ್ಳೆಯದು. ಹಿರಿಯ ಅಧಿಕಾರಿಗಳು ಆಗಾಗ್ಗೆ ಪೋಲೀಸ್ ಠಾಣೆಗೆ ಭೇಟಿ ನೀಡಬೇಕು. ಇತರೆ ಇಲಾಖೆಗಳಿಗೆ ಹೋಲಿಸಿದರೆ ಪೊಲೀಸ್ ಇಲಾಖೆಯಲ್ಲಿ ಶ್ರೇಣಿ ವ್ಯವಸ್ಥೆ ಹೆಚ್ಚಿದೆ. ಶಿಸ್ತು ಕೂಡ ಹೆಚ್ಚಿದೆ. ನೀವು ಮನಸ್ಸು ಮಾಡಿದರೆ ಅಪರಾಧಗಳು ತಾನಾಗಿಯೇ ಕಡಿಮೆಯಾಗಲು ಸಾಧ್ಯವಾಗುತ್ತದೆ.

ಕೋಮುಗಲಭೆಗಳು ಆಗಾಗ್ಗೆ ನಡೆಯುತ್ತಲೇ ಇರುವುದರಿಂದ ಕರಾವಳಿಯಲ್ಲಿ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ. ಕೋಮುಗಲಭೆಗಳನ್ನು ಹತ್ತಿಕ್ಕುವುದು ಅಗತ್ಯವಾಗಿ ಆಗಬೇಕಿದೆ. ಕೋಮುಗಲಭೆಗಳು ನಡೆಯಬಾರದು. ಅದು ಪ್ರಾರಂಭವಾದರೆ ನಿರಂತರವಾಗಿ ನಡೆಯುತ್ತವೆ. ಅದಕ್ಕಾಗಿ ಪ್ರಾರಂಭದಲ್ಲಿಯೇ ಕೋಮುಗಲಭೆಗಳನ್ನು ತಡೆಯಬೇಕಾದ್ದು ಅಗತ್ಯ ಮತ್ತು ಅನಿವಾರ್ಯ.

ಇತ್ತೀಚೆಗೆ ನಡೆದ ಪೊಲೀಸ್ ಸಮ್ಮೇಳನದಲ್ಲಿಯೂ ಹಲವು ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ. 2023 ಕ್ಕೆ ಹೋಲಿಸಿದರೆ ಸೈಬರ್ ಅಪರಾಧಗಳು 2024 ರಲ್ಲಿ ಹೆಚ್ಚಾಗಿವೆ. ಕೊಲೆ, ದರೋಡೆ, ಸರಗಳ್ಳತನ ಮುಂತಾದ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ. ಮಾದಕ ವಸ್ತುಗಳಿಂದ ನಮ್ಮ ಯುವ ಪೀಳಿಗೆ ಹಾಳಾದರೆ ಭವಿಷ್ಯ ಹಾಳಾಗುತ್ತದೆ. ಪೊಲೀಸರನ್ನು ಕಂಡರೆ ನಾಗರಿಕರಿಗೆ ಭಯ ಹಾಗೂ ಸ್ನೇಹ ಎರಡೂ ಇರಬೇಕು. ಪೋಲಿಸ್ ಠಾಣೆಗಳು ಜನಸ್ನೇಹಿಯಾಗಿರಬೇಕು. ನಾಗರಿಕರೊಂದಿಗೆ ಒಡನಾಟವಿಟ್ಟುಕೊಂಡು ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು, ಆಗ ಪರಿಹಾರಗಳು ಹೊಳೆಯುತ್ತವೆ. ಮಾದಕವಸ್ತುಗಳನ್ನು ಸಂಪೂರ್ಣ ನಿರ್ನಾಮ ಮಾಡಬೇಕು. ಸೈಬರ್ ಅಪರಾಧಗಳನ್ನು ಕಡಿಮೆ ಮಾಡುವ ಪ್ರಯತ್ನ ಮಾಡಬೇಕು.

ಪೊಲೀಸ್ ಸಮುದಾಯ ಭವನ ಸುಸಜ್ಜಿತವಾಗಿದ್ದು ನಿರ್ವಹಣೆಗೆ ಅಗತ್ಯವಿರುವಷ್ಟು ಆದಾಯ ಬರುವಂತೆ ಮಾಡಿಕೊಳ್ಳಬೇಕು. ಖಾಸಗಿಯವರಿಗೆ ಸ್ವಲ್ಪ ಹೆಚ್ಚಿನ ದರದಲ್ಲಿಯೇ ನೀಡಿದರೂ ಪೊಲೀಸ್ ಪೇದೆಗಳು ಹಾಗೂ ಸಹಾಯಕ ಪೊಲೀಸ್ ನಿರೀಕ್ಷಕರಿಗೆ ಕಡಿಮೆ ದರದಲ್ಲಿ ಅಥವಾ ನಿರ್ವಹಣಾ ವೆಚ್ಚ ಪಡೆದು ಸಮುದಾಯ ಭವನವನ್ನು ಒದಗಿಸುವಂತೆ ಸಲಹೆ ನೀಡುತ್ತಿದ್ದೇನೆ. ಪೊಲೀಸ್ ಪೇದೆಗಳು ಅಪರಾಧಗಳನ್ನು ಕಡಿಮೆ ಮಾಡಲು ಹಗಲು ರಾತ್ರಿ ಕೆಲಸ ಮಾಡುತ್ತಾರೆ. ಪೇದೆಗಳು ಹಾಕುವ ಟೋಪಿಗಳ ಬದಲಿಗೆ ಪಿ ಕ್ಯಾಪ್ ಒದಗಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ.

ಪೊಲೀಸ್ ವೈದ್ಯಕೀಯ ತಪಾಸಣಾ ವೆಚ್ಚವನ್ನು ಒಂದೂವರೆ ಸಾವಿರ ರೂ.ಗಳಿಗೆ ಹೆಚ್ಚಿಸಿದ್ದು, ಅದನ್ನು ಮತ್ತಷ್ಟು ಹೆಚ್ಚಿಸುವ ಅಗತ್ಯ ಬಿದ್ದರೆ ಹೆಚ್ಚಿಸಲಾಗುವುದು.
ಬೆಂಗಳೂರು ದೊಡ್ಡದಾಗಿ ಬೆಳೆಯುತ್ತಿರುವ ನಗರ. ಎಂಟು ಪೊಲೀಸ್ ವಿಭಾಗಗಳನ್ನು 11 ವಿಭಾಗಗಳಿಗೆ ಹೆಚ್ಚಿಸಿದ್ದು, ಡಿಸಿಪಿಗಳನ್ನು ಕೂಡ ಹೆಚ್ಚಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸುವುದು ಅಗತ್ಯ. ಕಾರಣ ಯಾರೇ ತಪ್ಪು ಮಾಡಿದರೂ ಸರ್ಕಾರವನ್ನೇ ದೂಷಿಸಲಾಗುತ್ತದೆ. ಅಹಿತಕರ ಘಟನೆಗಳು ನಡೆದರೆ ಸರ್ಕಾರ ಜವಾಬ್ದಾರಿ. ಅಂಥ ಪರಿಸ್ಥಿತಿಗಳು ಬರದೇ ಹೋಗಲಿ ಎಂದು ಆಶಿಸುತ್ತೇನೆ. ಪೊಲೀಸರು ತಮ್ಮ ಕೆಲಸವನ್ನು ಸಮಾಜ ಮತ್ತು ರಾಜ್ಯದ ಹಿತದೃಷ್ಟಿಯಿಂದ ಪ್ರಾಮಾಣಿಕವಾಗಿ ಮಾಡಬೇಕು ಎಂದರು.

`Good news for police' from the state government: P-cap instead of hat medical examination fee increased to Rs. 1500
Share. Facebook Twitter LinkedIn WhatsApp Email

Related Posts

ಕರ್ನಾಟಕದಿಂದ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಸುವ್ಯವಸ್ಥಿತ ವಸತಿ ಗೃಹಗಳ ನಿರ್ಮಾಣಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

17/07/2025 7:43 AM2 Mins Read

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 6,599 `ಗ್ರಾಮ ಗ್ರಂಥಾಲಯ’ಗಳ ಸ್ಥಾಪನೆ

17/07/2025 7:28 AM1 Min Read

ಹಾವು ಕಡಿದ್ರೆ ಆತಂಕ ಬೇಡ, ಜಸ್ಟ್ ಹೀಗೆ ಮಾಡಿ ಜೀವ ಉಳಿಸಬಹುದು

17/07/2025 7:18 AM1 Min Read
Recent News

“ಪ್ರಧಾನಿ ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ” : ತೇಜಸ್ವಿ ಸೂರ್ಯ ಜೊತೆ ‘ನಾರಾಯಣ ಮೂರ್ತಿ’ ಮಾತು

17/07/2025 7:50 AM

ರಾಜ್ಯ ಸರ್ಕಾರದಿಂದ `ಪೊಲೀಸರಿಗೆ ಗುಡ್ ನ್ಯೂಸ್’ : ಟೋಪಿ ಬದಲಿಗೆ ಪಿ ಕ್ಯಾಪ್, ವೈದ್ಯಕೀಯ ತಪಾಸಣಾ ವೆಚ್ಚ 1500 ರೂ.ಗೆ ಹೆಚ್ಚಳ

17/07/2025 7:46 AM

ಕರ್ನಾಟಕದಿಂದ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಸುವ್ಯವಸ್ಥಿತ ವಸತಿ ಗೃಹಗಳ ನಿರ್ಮಾಣಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

17/07/2025 7:43 AM

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 6,599 `ಗ್ರಾಮ ಗ್ರಂಥಾಲಯ’ಗಳ ಸ್ಥಾಪನೆ

17/07/2025 7:28 AM
State News
KARNATAKA

ರಾಜ್ಯ ಸರ್ಕಾರದಿಂದ `ಪೊಲೀಸರಿಗೆ ಗುಡ್ ನ್ಯೂಸ್’ : ಟೋಪಿ ಬದಲಿಗೆ ಪಿ ಕ್ಯಾಪ್, ವೈದ್ಯಕೀಯ ತಪಾಸಣಾ ವೆಚ್ಚ 1500 ರೂ.ಗೆ ಹೆಚ್ಚಳ

By kannadanewsnow5717/07/2025 7:46 AM KARNATAKA 2 Mins Read

ಬೆಂಗಳೂರು : ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ. ಸಮಾಜದ ಶಾಂತಿ ಸುವ್ಯವಸ್ಥೆ, ಜನರ ಆಸ್ತಿ, ಮಾನ,…

ಕರ್ನಾಟಕದಿಂದ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಸುವ್ಯವಸ್ಥಿತ ವಸತಿ ಗೃಹಗಳ ನಿರ್ಮಾಣಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

17/07/2025 7:43 AM

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 6,599 `ಗ್ರಾಮ ಗ್ರಂಥಾಲಯ’ಗಳ ಸ್ಥಾಪನೆ

17/07/2025 7:28 AM

ಹಾವು ಕಡಿದ್ರೆ ಆತಂಕ ಬೇಡ, ಜಸ್ಟ್ ಹೀಗೆ ಮಾಡಿ ಜೀವ ಉಳಿಸಬಹುದು

17/07/2025 7:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.