ಬೆಂಗಳೂರು: ರಾಜ್ಯದ ಅನೇಕ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದಾರೆ. ಇಂತಹ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಅಂತರ್ ಜಿಲ್ಲಾ ವರ್ಗಾವಣೆಗೆ ಚಾಲನೆ ನೀಡುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆ ಕಾರಣದಿಂದ ವಿಧಿಸಲಾಗಿದ್ದಂತ ನೀತಿ ಸಂಹಿತೆ ತೆರವುಗೊಂಡಿದೆ. ನೀತಿ ಸಂಹಿದೆ ಕಾರಣದಿಂದಾಗಿ ಯಾವುದೇ ರೀತಿಯ ಕೆಲಸ ಕಾರ್ಯಗಳು ಸಾಧ್ಯವಾಗಿರಲಿಲ್ಲ. ಈಗ ನೀತಿ ಸಂಹಿತೆ ತೆರವುಗೊಂಡಿದ್ದು, ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಚಾಲನೆ ನೀಡುತ್ತೇವೆ ಎಂದರು.
ಕಾಂಗ್ರೆಸ್ ನಲ್ಲಿ ಹಿರಿಯರನ್ನು ಪರಿಗಣಿಸುತ್ತಿಲ್ಲ ಅನ್ನೋ ಆರೋಪದ ಬಗ್ಗೆ ಪ್ರತಿಕ್ರಿಯಿಸಿದಂತ ಅವರು, ಆ ರೀತಿ ನಮ್ಮಲ್ಲಿ ಏನೂ ಆಗಿಲ್ಲ. ನಮ್ಮಲ್ಲಿ ಒಳ ಜಗಳ ಕೂಡ ಇಲ್ಲ. ಯಾವುದಾದರೂ ವಿಚಾರಗಳಿಗೆ ಒಬ್ಬೊಬ್ಬರು ಅಭಿಪ್ರಾಯ ಹಂಚಿಕೊಳ್ಳೋದು ಸಹಜ. ಅದು ಬಿಟ್ಟರೇ ಯಾವುದೇ ಭಿನ್ನಾಭಿಪ್ರಾಯ ನಮ್ಮಲ್ಲಿ ಇಲ್ಲ ಅಂತ ತಿಳಿಸಿದರು.
ಇದೇ ಸಂದರ್ಭದಲ್ಲಿ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವಂತ ಮೋದಿಯವರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅಭಿನಂದನೆ ಸಲ್ಲಿಸಿದರು. ಅಲ್ಲದೇ ಜನಪರ ಕೆಲ ಮಾಡುವಂತೆ ಆಶಿಸಿದರು.
ನೀಟ್ ಪರೀಕ್ಷೆ ಅಕ್ರಮ: ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಹಿತ ಕಾಯಲು ಮುಂದಾಗಬೇಕು: ಸಚಿವ ಬೋಸರಾಜು ಆಗ್ರಹ
Modi 3.0: ‘ಕೇಂದ್ರ ಸಚಿವ’ರಾಗಿ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ‘ಮೋದಿ’ಗೆ ಧನ್ಯವಾದ ಅರ್ಪಿಸಿದ ‘HD ಕುಮಾರಸ್ವಾಮಿ’