ಬೆಂಗಳೂರು: ನನಗೆ ಇಂದೇ ನಿಮಗೆ ನೇಮಕಾತಿ ಪತ್ರ ನೀಡಬೇಕು ಎನ್ನುವ ಆಲೋಚನೆ ಇತ್ತು. ಒಂದಷ್ಟು ಸಿಂದುತ್ವ ಬಾಕಿ ಇರುವ ಕಾರಣ ಮೇ 1 ರಂದು ನೇಮಕಾತಿ ಪತ್ರ ನಿಮ್ಮ ಕೈ ಸೇರುವುದು. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ನಾನು ಸಲಹೆ ನೀಡಿದೆ. ವಾಹನ ಚಾಲಕರು, ಲೋಡರ್ಸ್ ವಿಚಾರವಾಗಿ ನಾರಾಯಣ ಅವರು ಗಮನ ಸೆಳೆದಿದ್ದಾರೆ. ಅವರ ಮನವಿಯನ್ನು ಕಾರ್ಯಗತಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿದರು.
“ಶೂ, ಕೈಗವಸು ಸೇರಿದಂತೆ ಇತರೇ ಸಲಕರಣೆಗಳ ವಿತರಣೆಗೆ ರೂ.5 ಕೋಟಿ, ಸಮವಸ್ತ್ರಕ್ಕೆ ರೂ. 6 ಕೋಟಿ, ಮಕ್ಕಳ ವಿದ್ಯಾಭ್ಯಾಸದ ಶುಲ್ಕ ಮರುಪಾವತಿಗೆ ರೂ. 6 ಕೋಟಿ, ಆರೋಗ್ಯಕ್ಕೆ ರೂ.4 ಕೋಟಿ, ಒಂಟಿ ಮನೆಗೆ ಪ್ರತ್ಯೇಕವಾಗಿ ರೂ.30 ಕೋಟಿ, ಕೌಶಲ್ಯ ಅಭಿವೃದ್ದಿಗೆ ರೂ.5 ಕೋಟಿ, ಟ್ಯಾಕ್ಸಿ, ಆಟೋ ಚಾಲಕರಿಗೆ ರೂ. 10 ಕೋಟಿ ಒಟ್ಟು ನಿಮ್ಮ ಕಲ್ಯಾಣಕ್ಕೆ ರೂ. 64 ಕೋಟಿ ಮೀಸಲಿಡಲಾಗಿದೆ” ಎಂದು ಹೇಳಿದರು.
“ಪೌರಕಾರ್ಮಿಕರ ಬದುಕಿನಲ್ಲಿ ಬದಲಾವಣೆ ತರುವುದೇ ಕಾಂಗ್ರೆಸ್ ಸರ್ಕಾರದ ಸಂಕಲ್ಪ. ಪೌರಕಾರ್ಮಿಕರು ನಮ್ಮ ಹಾಗೂ ದೇಶದ ಶಕ್ತಿ, ಕಾಂಗ್ರೆಸ್ ಸರ್ಕಾರ ನಿಮ್ಮ ಶಕ್ತಿ ಎಂಬುದನ್ನು ಮರೆಯಬಾರದು. ನಿಮ್ಮ ಕೆಲಸ ಖಾಯಂ ಆದ ತಕ್ಷಣ ನಿಮಗೆ ಬರುವ ಸಂಬಳ 50 ಸಾವಿರ ಮುಟ್ಟುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ
BREAKING: ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಲಾ 2 ರೂಪಾಯಿ ಹೆಚ್ಚಿಸಿದ ಕೇಂದ್ರ ಸರ್ಕಾರ