ಬೆಂಗಳೂರು: ಬೆಂಗಳೂರು: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (ಕೆಇಆರ್ ಸಿ) ವಿದ್ಯುತ್ ಶುಲ್ಕ ಇಳಿಕೆ ಮಾಡಿದ್ದು, ಈ ಮೂಲಕ ಗ್ರಾಹಕರ ಮೇಲಿನ ಹೊರೆಯನ್ನು ಇಳಿಸಲು ಮುಂದಾಗಿದೆ.
ಅಂದ ಹಾಗೇ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕೆಇಆರ್‌ಸಿ ವಿದ್ಯುತ್ ದರ ಇಳಿಕೆ ಮಾಡಿದೆ ಎನ್ನಲಾಗಿದ್ದು, ಇಳಿಕೆ ದರದ ಪ್ರಕಾರ ಪ್ರಸಕ್ತ ಜನವರಿ ತಿಂಗಳಲ್ಲಿ ವಿದ್ಯುತ್ ಬಿಲ್ ಕಡಿಮೆಯಾಗಲಿದೆ ಎನ್ನಲಾಗಿದೆ. ಕೆಇಆರ್ ಸಿ ಸೂಚನೆ ಅನ್ವಯ ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ಗೆ 37 ಪೈಸೆ, ಮೆಸ್ಕಾಂ ವ್ಯಾಪ್ತಿಯಲ್ಲಿ 31 ಪೈಸೆ, ಹೆಸ್ಕಾಂ ವ್ಯಾಪ್ತಿಯಲ್ಲಿ 3 ಪೈಸೆ, ಜೆಸ್ಕಾಂ ವ್ಯಾಪ್ತಿಯಲ್ಲಿ 51 ಪೈಸೆ ಮತ್ತು ಸೆಸ್ಕ್ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ಗೆ 39 ಪೈಸೆ ಕಡಿಮೆಯಾಗಲಿದೆ. ಜನವರಿ ತಿಂಗಳ ವಿದ್ಯುತ್ ಬಿಲ್‌ನಲ್ಲಿ ಸರಿದೂಗಿಸುವಂತೆ ಎಲ್ಲಾ ಎಸ್ಕಾಂಗಳಿಗೆ ಸೂಚನೆ ನೀಡಿದೆ ಎನ್ನಲಾಗಿದೆ.