ಬೆಂಗಳೂರು: ಸ್ವಾತಂತ್ರ್ಯ ದಿನದ ಅಂಗವಾಗಿ ಸನ್ನಡತೆ ಆಧಾರದ ಮೇಲೆ 84 ಕೈದಿಗಳನ್ನು ಬಿಡುಗಡೆ ಮಾಡಲಾಗ್ತಿದೆ. ಆಜಾದಿ ಕಾ ಅಮೃತ ಮಹೋತ್ಸವ ದಿನದ ಅಂಗವಾಗಿ ನಮ್ಮ 1 ಲಕ್ಷದ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ತಿರಂಗ ಹಾರಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಚಂದ್ರು ಹತ್ಯೆ ಪ್ರಕರಣ ಚಾರ್ಜ್ ಶೀಟ್ ಸಲ್ಲಿಕೆ ವಿಚಾರ ಪ್ರತಿಕ್ರಿಯಿಸಿ, ಚಂದ್ರು ಹತ್ಯೆಗೆ ಭಾಷೆಯೂ ಒಂದು ಕಾರಣವಾಗಿದೆ. ಚಾರ್ಜ್ ಶೀಟ್ ಬಗ್ಗೆ ನಾನು ಓದಿದ್ದೇನೆ. ಆದ್ರೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿಲ್ಲ. ಚಂದ್ರು ಹತ್ಯೆಗೆ ಭಾಷೆಯೂ ಒಂದು ಕಾರಣ ಅನ್ನೋದು ಚಾರ್ಜ್ ಶೀಟ್ನಲ್ಲಿ ಉಲ್ಲೇಖ ಆಗಿದೆ ಎಂದರು.
ಪಿಎಸ್ಐ ಅಕ್ರಮದ ತನಿಖೆಯನ್ನು ಅತ್ಯಂತ ಗಂಭೀರವಾಗಿ ತನಿಖೆ ಮಾಡಿಸುತ್ತಿದ್ದೇವೆ. ಸಿಐಡಿಗೆ ಯಾವುದೇ ಒತ್ತಡ ಕೊಟ್ಟಿಲ್ಲ ಅವರಿಗೆ ನಾವು ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಇಡೀ ದೇಶದಲ್ಲೇ ಮೊದಲು ತಪ್ಪಿತಸ್ಥ ಐಪಿಎಸ್ ಅಧಿಕಾರಿಯನ್ನು ಬಂಧಿಸಿದ್ದೇವೆ. ಆದರೆ ಇದರಲ್ಲಿ ಯಾರೇ ಆದರೂ ರಾಜಕೀಯ ಲಾಭ ಪಡೆದುಕೊಳ್ಳಬಾರದು.. ಅವರ ಕಾಲದಲ್ಲಿ ಎಷ್ಟು ವಲಸ್ಸು ದುರ್ನಾತ ನಡೆದಿತ್ತು ಎಂಬುದನ್ನು ನಾನು ದಾಖಲೆ ಸಮೇತ ಹೇಳಬಲ್ಲೇ ಎಂದರು.
ನಮ್ಮ ಕಣ್ಣ ಮುಂದೆ ಇರೋದು ಪಿಎಸ್ಐ ಅಕ್ರಮದ ತನಿಖೆ ಬಗ್ಗೆ ಆಗಿದೆ. ಪ್ರಕರಣದ ತನಿಖೆ ಹಂತದಲ್ಲಿ ಇರುವಾಗ ನಾನು ಇದಂತೆ ಅದಂತೆ ಹೇಳೋದು ತಪ್ಪಾಗುತ್ತದೆ. ಅಮೃತ ಪೌಲ್ ವೀಡಿಯೋ ಸಂದೇಶ ಬಹಿರಂಗ ಕುರಿತ ಡಿಕೆಶಿ ಹೇಳಿಕೆಗೆ ಆರಗ ತಿರುಗೇಟು ನೀಡಿದರು.
ಚಿಕ್ಕಮಗಳೂರು: ನೊಂದ ಸಂತ್ರಸ್ತೆಗೆ ಧೈರ್ಯ ತುಂಬಿ, 50 ಸಾವಿರ ರೂ ವೈಯಕ್ತಿಕ ಪರಿಹಾರ ನೀಡಿದ ಸಚಿವರು