ಬೆಂಗಳೂರು: ರಾಜ್ಯ ಸರ್ಕಾರದಿಂದ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದೆ. ಅದೇ ಕಾರ್ಮಿಕರ ಆರೋಗ್ಯ ಭದ್ರತೆಗಾಗಿ ಅಪಘಾತ ಪರಿಹಾರ ಯೋಜನೆಯನ್ನು ಜಾರಿಗೊಳಿಸಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯನ್ನು ಸರ್ಕಾರದಿಂದ ಜಾರಿಗೊಳಿಸಲಾಗಿದೆ ಎಂದಿದೆ.
ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕೆಲಸಗಳಲ್ಲಿ ತೊಡಗಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕೊಡಲು ಈ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದೆ.
ಯಾರು ಈ ಯೋಜನೆಗೆ ಅರ್ಹರು.?
- ಚಾಲಕ
- ನಿರ್ವಾಹಕ
- ಕ್ಲೀನರ್
- ನಿಲ್ದಾಣ ಸಿಬ್ಬಂದಿ
- ಮಾರ್ಗ ಪರಿಶೀಲನಾ ಸಿಬ್ಬಂದಿ
- ಬುಕ್ಕಿಂಗ್ ಗುಮಾಸ್ತ
- ನಗದು ಗುಮಾಸ್ತ
- ಡಿಪೋ ಗುಮಾಸ್ತ
- ಸಮಯ ಪಾಲಕ
- ಕಾವಲುಗಾರ ಅಥವಾ ಪರಿಚಾರಕ
- ಗ್ಯಾರೇಜುಗಳಲ್ಲಿ ಟೈರ್ ಜೋಡಿಸುವ ಮತ್ತು ಬೇರ್ಪಡಿಸುವವರು
- ಪಂಚರ್ ದುರಸ್ತಿ ಮಾಡುವವರು
- ವೀಲ್ ಬ್ಯಾಲೆನ್ಸಿಂಗ್ ಮತ್ತು ಅಲೈಮೆಂಟ್ ಕಾರ್ಮಿಕರು
- ನೀರಿನಿಂದ ಸ್ವಚ್ಛಗೊಳಿಸುವ ಘಟಕಗಳಲ್ಲಿ ಕೆಲಸ ಮಾಡುವವರು
- ಮೋಟಾರು ವಾಹನ ಹೊರಕವಚ ನಿರ್ಮಾಣಗಾರರು
- ಟಿಂಕರಿಂಗ್, ಎಲೆಕ್ಟಿಕಲ್ ಹಾಗೂ ಎಸಿ ಘಟಕದ ಕಾರ್ಮಿಕರು
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ನೀವು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ಭೇಟಿ ನೀಡಿ, ಪಡಿಯಬಹುದಾಗಿದೆ.
ಮಂಡಳಿಯ ವತಿಯಿಂದ ರಾಜ್ಯದ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಆರೋಗ್ಯ ಭದ್ರತೆಗೆ ಅಪಘಾತ ಪರಿಹಾರ ಯೋಜನೆಯನ್ನು ಜಾರಿಗೆ ತರಲಾಗಿದೆ.#ksuwssb #Karnataka pic.twitter.com/Nmj8ySJvo0
— Unorganized Workers Social Security Board (@ksuwssb) December 29, 2024
BREAKING: ರಾಜ್ಯದಲ್ಲಿ ಸರಣಿ ಆತ್ಮಹತ್ಯೆ, ಬಾಣಂತಿಯರ ಸಾವು ಕೇಸ್: ಬಿಜೆಪಿ ಮುಖಂಡರ ತಂಡ ರಚನೆ
ಡಿ.31ರಂದು ಅಲ್ಲಿ ಇಲ್ಲಿ ಯಾಕೆ? ‘ಫ್ಯಾಮಿಲಿ ಸಹಿತ’ ಇಲ್ಲಿಗೆ ಹೋಗಿ, ಹೊಸ ವರ್ಷಾಚರಣೆ ಮಾಡಿ