Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

​ಗುಜರಾತ್‌ನಲ್ಲಿ ಎಬೋಲಾ ಆತಂಕ: ಕಾಂಗೋದಿಂದ ಬಂದ 37 ವರ್ಷದ ವ್ಯಕ್ತಿ ಆಸ್ಪತ್ರೆಗೆ ದಾಖಲು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : `ಆಸ್ತಿಗಳ ಹಕ್ಕು’ ವರ್ಗಾವಣೆಗೆ `ಇ- ಖಾತೆ’ ಕಡ್ಡಾಯ!
KARNATAKA

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : `ಆಸ್ತಿಗಳ ಹಕ್ಕು’ ವರ್ಗಾವಣೆಗೆ `ಇ- ಖಾತೆ’ ಕಡ್ಡಾಯ!

By kannadanewsnow57
vidhana soudha
vidhana soudha

ಬೆಂಗಳೂರು : ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಸೂಚಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜಿಸಿ, ಅಕ್ಟೊಬರ್ 07, 2024 ರಿಂದ ಜಾರಿಗೆ ಬರುವಂತೆ ಸರ್ಕಾರವು ಆದೇಶಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಅ.07, 2024 ರಿಂದ ಎಲ್ಲಾ ಉಪ-ನೋಂದಣಿ ಕಛೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕಿರುತ್ತದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ, ಖಾತಾ ತಂತ್ರಾಂಶ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ. ಜಮೀನಿನ ಸರ್ವೇ ನಕ್ಷೆ (ಸ್ಕೆಚ್) ನಮೂನೆ 11 ಇ ಇರುವ ಮೋಜಣಿ ತಂತ್ರಾಂಶದೊಂದಿಗೆ ಕಾವೇರಿ ತಂತ್ರಾಂಶವನ್ನು ಅಕ್ಟೋಬರ್ 05, 2016 ರಿಂದ ಸಂಯೋಜನೆ ಮಾಡಲಾಗಿದೆ. ಗ್ರಾಮ ಪಂಚಾಯತ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ 2014 ರಿಂದ ಸಂಯೋಜನೆಗೊಳಿಸಲಾಗಿದೆ.

ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ- ಆಸ್ತಿ ತಂತ್ರಾಂಶ ವನ್ನು ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ ದಿನಾಂಕ:29-01-2020 ರಿಂದ ನೊಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ.

ಇ-ಖಾತಾ ಸಂಯೋಜನೆ ಪ್ರಯೋಜನಗಳು ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೊಸಹೋಗುವುದನ್ನು ತಡೆಯುವುದು. ಮತ್ತು ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.

ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿ ಆಗುವುದನ್ನು ತಪ್ಪಿಸಬಹುದಾಗಿದೆ. ಹಾಗೂ ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸುವ ಉದ್ದೇಶವನ್ನು ಈ ತಂತ್ರಾಂಶ ಹೊಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for property buyers sellers: 'E-account' mandatory for transfer of rights of properties ಆಸ್ತಿ ಖರೀದಿ ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯದಲ್ಲಿ ‘ಎನಿವೇರ್ ನೋಂದಣಿ’ ವ್ಯವಸ್ಥೆ ಜಾರಿ!
Share. Facebook Twitter LinkedIn WhatsApp Email

Related Posts

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

2 Mins Read

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

2 Mins Read

ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!

2 Mins Read
Recent News

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

​ಗುಜರಾತ್‌ನಲ್ಲಿ ಎಬೋಲಾ ಆತಂಕ: ಕಾಂಗೋದಿಂದ ಬಂದ 37 ವರ್ಷದ ವ್ಯಕ್ತಿ ಆಸ್ಪತ್ರೆಗೆ ದಾಖಲು

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

State News
KARNATAKA

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜುಗಳು ಹಾಗೂ ಪದವಿ ಪೂರ್ವ ಕಾಲೇಜುಗಳು ಆರಂಭವಾಗುತ್ತಿರುವ ಬೆನ್ನಲ್ಲೇ, ಕರ್ನಾಟಕ ರಾಜ್ಯ ರಸ್ತೆ…

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!

ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು ಮಾಜಿ ಸಿಎಂ ಎಸ್.ಎಂ.ಕೃಷ್ಣ: ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.