ಬೆಂಗಳೂರು : ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ ಪರಿಹರಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಇ – ಖಾತಾ ಪಡೆಯಲು ಯಾವುದೇ ಗಡುವು ಇಲ್ಲ. ನಾಗರಿಕರು ಊಹಾಪೋಹಗಳಿಗೆ ಕಿವಿಗೊಡದೆ, ಆತಂಕಗೊಳ್ಳದೆ ಇ-ಖಾತಾ ಮಾಡಿಸಿಕೊಳ್ಳಬಹುದು. ಮಧ್ಯವರ್ತಿಗಳ ಹಾವಳಿ, ನಕಲಿ ನೋಂದಣಿಗಳನ್ನು ತಡೆಯಲು, ಆಸ್ತಿ ಮಾಲೀಕತ್ವವನ್ನು ರಕ್ಷಿಸಲು ಇ-ಖಾತಾ ವ್ಯವಸ್ಥೆ ಶಾಶ್ವತ ಪರಿಹಾರವಾಗಿದೆ ಎಂದು ಹೇಳಿದ್ದಾರೆ.
ಇನ್ನು ಆಸ್ತಿ ಮಾರಾಟಕ್ಕಾಗಿ ತುರ್ತಾಗಿ ಇ-ಖಾತಾ ಅಗತ್ಯವಿರುವವರಿಗಾಗಿ ವಾರ್ಡ್‌ಗಳಲ್ಲಿ ಪ್ರತ್ಯೇಕ ಸಹಾಯ ಕೇಂದ್ರ ತೆರೆಯಲಾಗಿದೆ. ಕಂದಾಯ ಅಧಿಕಾರಿಗಳಿಗೆ ಎಲ್ಲ ರೀತಿಯ ದಾಖಲೆಗಳನ್ನು ನೀಡಿ ಇ-ಖಾತಾ ಪಡೆದುಕೊಳ್ಳಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.