ಬೆಂಗಳೂರು: ನಗರದ ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಆಸ್ತಿ ತೆರಿಗೆಯನ್ನು ಸಂಪೂರ್ಣ ಪಾವತಿ ಮಾಡಿದವರಿಗೆ ಶೇ.5ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಈ ಸಂಬಂಧ ಅಧಿಸೂಚನೆಯನ್ನ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ. ಅದರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಬಿಬಿಎಂಪಿಯ ಆರ್ಥಿಕ ಹಿತದೃಷ್ಟಿಯಿಂದ 2024-25ನೇ ಸಾಲಿನಲ್ಲಿ ಆಸ್ತಿ ತೆರಿಗೆಯನ್ನು ಸಂಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇ.5ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದಿದ್ದಾರೆ.
ಇನ್ನೂ ಈ ತೆರಿಗೆಯ ಮೇಲಿನ ಶೇ.5ರಷ್ಟು ರಿಯಾಯಿತಿಯ ಅವಧಿಯನ್ನು ದಿನಾಂಕ 01-05-2024ರಿಂದ 31-07-2024ರವರೆಗೆ ವಿಸ್ತರಿಸಿ ಆದೇಶಿಸೋದಾಗಿ ತಿಳಿಸಿದ್ದಾರೆ.
‘ಕಾನೂನು ಮಾಡುವ ಹಕ್ಕು ಸಂಸತ್ತಿಗಿದೆ’: CAA ಕುರಿತ ಕೇರಳ, ತಮಿಳುನಾಡು, ಬಂಗಾಳ ಸರ್ಕಾರಗಳಿಗೆ ‘ಅಮಿತ್ ಶಾ’ ಉತ್ತರ
ತಪ್ಪು ತಿದ್ದಿಕೊಳ್ಳಲು ಅವಕಾಶ ಕೊಡಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭಾವುಕ ನುಡಿ