ನವದೆಹಲಿ: ಇಂದಿನಿಂದ ನವರಾತ್ರಿ ಹಬ್ಬ ಪ್ರಾರಂಭವಾಗಿದೆ. ದೇಶದ್ಯಾಂತ ಅದ್ದೂರಿಯಾಗಿ, ಸಂಭ್ರಮದಿಂದ ದಸರಾ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಭಾರತೀಯ ರೈಲ್ವೆ  ಕೂಡಾ ಈ ಅವಧಿಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ವಿಶೇಷ ಊಟನೀಡಲು ನಿರ್ಧರಿಸಿದೆ.

ನವರಾತ್ರಿ ಹಿನ್ನೆಲೆ 9 ದಿನಗಳ ಕಾಲ ಭಾರತೀಯ ರೈಲ್ವೆಯಲ್ಲಿ ವಿಶೇಷ ಊಟದ ಮೆನು ಇರಲಿದ್ದು, ರೈಲಿನಲ್ಲೂ ಹಬ್ಬದ ಊಟ ಸವಿಯಬಹುದು ಎಂದು ಭಾರತೀಯ ರೈಲ್ವೆ ಟ್ವೀಟ್ ಮಾಡಿದೆ. ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ಮಾತ್ರ ಈ ಸ್ಪೆಷಲ್ ಮೆನು ಇರಲಿದೆ ಎಂದು ಸ್ಪಷ್ಟಪಡಿಸಿದೆ.

 

ಫುಡ್ ಆನ್ ಟ್ರ‍್ಯಾಕ್ ಅಪ್ಲಿಕೇಶನ್, irctc.co.in ಅಥವಾ 1323 ಗೆ ಕರೆ ಮಾಡಿ ವಿಶೇಷ ಮೆನುವನ್ನು ಆರ್ಡರ್ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಈ ಪ್ರಕಟಣೆಯಲ್ಲಿ ರೈಲ್ವೆ ಇಲಾಖೆ ವಿಶೇಷ ಥಾಲಿಯ ಫೋಟೋವನ್ನೂ ಲಗತ್ತಿಸಿದೆ.

Share.
Exit mobile version