ಬೆಂಗಳೂರು: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ಎಸ್ಎಂವಿಟಿ ಬೆಂಗಳೂರು ಮತ್ತು ಕೊಲ್ಲಂ ನಡುವೆ ಒಂದು ಟ್ರಿಪ್ ವಿಶೇಷ ರೈಲು ಕಾರ್ಯಾಚರಣೆ ಮಾಡಲಾಗುವುದು.
ರೈಲು ಸಂಖ್ಯೆ 06573/06574 ಎಸ್ಎಂವಿಟಿ ಬೆಂಗಳೂರು-ಕೊಲ್ಲಂ-ಎಸ್ಎಂವಿಟಿ ಬೆಂಗಳೂರು ಎಕ್ಸ್’ಪ್ರೆಸ್ ವಿಶೇಷ (ಒಂದು ಟ್ರಿಪ್):
ರೈಲು ಸಂಖ್ಯೆ 06573 (ಎಸ್ಎಂವಿಟಿ ಬೆಂಗಳೂರು – ಕೊಲ್ಲಂ): ಡಿಸೆಂಬರ್ 25ರಂದು ಮಧ್ಯಾಹ್ನ 3 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 6:30ಕ್ಕೆ ಕೊಲ್ಲಂ ತಲುಪಲಿದೆ. ಇದೆ ರೈಲು (06574) ಡಿಸೆಂಬರ್ 26ರಂದು ಬೆಳಿಗ್ಗೆ 10:30ಕ್ಕೆ ಕೊಲ್ಲಂನಿಂದ ಹೊರಟು, ಮರುದಿನ ಮುಂಜಾನೆ 03:30ಕ್ಕೆ ಎಸ್ಎಂವಿಟಿ ಬೆಂಗಳೂರಿಗೆ ಆಗಮಿಸಲಿದೆ.
ಈ ವಿಶೇಷ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಾಸ್ಸೆರಿ, ತಿರುವಲ್ಲಾ, ಚೆಂಗನ್ನೂರು, ಮಾವೇಲಿಕರ ಮತ್ತು ಕಾಯಂಕುಲಂ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಈ ರೈಲು ಒಟ್ಟು 22 ಬೋಗಿಗಳನ್ನು ಹೊಂದಿರಲಿದ್ದು, ಇದರಲ್ಲಿ 20 ಸ್ಲೀಪರ್ ಕ್ಲಾಸ್ ಬೋಗಿಗಳು ಮತ್ತು 2 ಎಸ್ಎಲ್ಆರ್/ಡಿ (SLR/D) ಬೋಗಿಗಳು ಇರಲಿವೆ.
SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಮಹಿಳೆ ಲೈವ್ ಸೂಸೈಡ್







