ಬೆಂಗಳೂರು: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ದರವನ್ನು ಶೀಘ್ರವೇ ಪರಿಷ್ಕರಣೆ ಮಾಡಲಾಗುತ್ತಿದೆ. ಟಿಕೆಟ್ ದರವನ್ನು ಬಡವರು, ಮಧ್ಯಮ ವರ್ಗದ ಜನರಿಗೂ ವಂದೇ ಭಾರತ್ ರೈಲಿನಲ್ಲಿ ಓಡಾಡುವಂತೆ ಟಿಕೆಟ್ ದರ ಪರಿಷ್ಕರಣೆ ಮಾಡಲಾಗುತ್ತದೆ ಎಂಬುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಂದೇ ಭಾರತ್ ರೈಲಿನಲ್ಲಿ ಬಡವರು, ಮಧ್ಯಮ ವರ್ಗದವರು ಓಡಾಡುವಂತೆ ಆಗಬೇಕು. ಅದಕ್ಕಾಗಿ ಟಿಕೆಟ್ ದರ ಪರಿಷ್ಕರಣೆ ಮಾಡಲಾಗುತ್ತಿದೆ. ನಿನ್ನೆ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೂ ಚರ್ಚೆ ಮಾಡಲಾಗಿದೆ ಎಂದರು.
ಕರ್ನಾಟಕದಲ್ಲಿ ವಿಭಿನ್ನ ರೀತಿಯಲ್ಲಿ ರೈಲ್ವೆ ವಿಭಾಗಗಳು ಅಭಿವೃದ್ಧಿಯಾಗಲಿದ್ದಾವೆ. ಯಶವಂತಪುರ ಟು ಚನ್ನಸಂದ್ರ ನಡುವೆ 25 ಕಿಲೋ ಮೀಟರ್ ಮತ್ತು ಬೈಯ್ಯಪ್ಪನಹಳ್ಳಿ ಟು ಹೊಸೂರು ನಡುವೆ 48 ಕಿಲೋಮೀಟರ್ ಹಳಿ ಡಬ್ಲಿಂಗ್ ಯೋಜನೆಗೆ 814 ಕೋಟಿ ರೂ ವೆಚ್ಚವಾಗಲಿದೆ. ಇದಕ್ಕೆ ಕೇಂದ್ರ ಸರ್ಕಾರ ಅನುದಾನ ಮಂಜೂರು ಮಾಡಲಿದೆ ಎಂದರು.
ಗಮನಿಸಿ: ಆಗಸ್ಟ್.25ಕ್ಕೆ ‘KAS ನೇಮಕಾತಿ ಪೂರ್ವಭಾವಿ ಪರೀಕ್ಷೆ’ ಮರುನಿಗದಿ | KAS Exam 2024
BIG NEWS: ‘ಶಿಕ್ಷಣ ಸಚಿವ’ರ ಕ್ಷೇತ್ರದಲ್ಲೇ ಲಂಚಾವತಾರ: ‘ಪೋನ್ ಪೇ’ ಮೂಲಕವೇ ‘SDA ಲಂಚ ಸ್ವೀಕಾರ’