ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಮಾರ್ಚ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 35 ಕೆ.ಜಿ ಅಕ್ಕಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.
ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.