ಬೆಂಗಳೂರು : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರ ನೀಡುತ್ತಿರುವಂತೆ ಸಾರವರ್ಧಿತ ಅಕ್ಕಿಯನ್ನು ರಾಜ್ಯದಿಂದಲೂ ವಿತರಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಡಾ.ಯತೀಂದ್ರ ಪ್ರಶ್ನೆಗೆ ಉತ್ತರಿಸಿದ ಸಚಿವರ ಕೆ.ಹೆಚ್. ಮುನಿಯಪ್ಪ, ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರದಿಂದ ಸಾರವರ್ಧಿತ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಪ್ರಸ್ತುತ ಗದಗ, ಕೊಪ್ಪಳ, ಹಾವೇರಿ, ರಾಯಚೂರು, ಶಿವಮೊಗ್ಗ ಸೇರಿ ಇತರೆ ಜಿಲ್ಲೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಿಸಲಾಗುತ್ತಿದೆ. ರಾಜ್ಯ ಸರ್ಕಾರದಿಂದಲೂ ಸಾರವರ್ಧಿತ ಅಕ್ಕಿ ವಿತರಿಸುವ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಪಡಿತರ ಕಾರ್ಡ್ ಗಾಗಿ 2,95,986 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಪರಿಶೀಲನೆ ನಂತರ 55,950 ಅರ್ಜಿಗಳು ಬಿಪಿಎಲ್ ಅಡಿಯಲ್ಲಿ ಬರುವುದಿಲ್ಲ. ಬಾಕಿ ಇರುವ 1.73 ಲಕ್ಷ ರೇಷನ್ ಗಳನ್ನು ಶೀಘ್ರವೇ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಮೂಲಕ ಹೊಸ ರೇಷನ್ ಕಾರ್ಡ್ ಗೆ ಕಾಯುತ್ತಿದ್ದ ಜನರಿಗೆ ಸಿಹಿಸುದ್ದಿ ನೀಡಿದ್ದಾರೆ.