ಬೆಳಗಾವಿ : 2026ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಐಪಿಎಲ್ ಪಂದ್ಯ ನಡಿಯಲ್ಲ ಎಂದು ತಿಳಿದುಬಂದಿತು. ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ IPL ಪಂದ್ಯಗಳನ್ನು ನಡೆಸಿ ನಡೆಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆದರೆ ಬೆನ್ನಲ್ಲೇ ಇಂದು ಸಚಿವ ಸಂಪುಟದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್‌ಸಿಬಿ ಪಂದ್ಯ ನಡೆಸಲು ಅನುಮತಿ ಕುರಿತಂತೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಹೌದು ಕ್ರಿಕೆಟ್ ಅಭಿಮಾನಿಗಳಿಗೆ ಸರ್ಕಾರ ಇದೀಗ ಸಿಹಿ ಸುದ್ದಿ ನೀಡುತ್ತಾ ಎನ್ನುವ ಕುತೂಹಲ ಮೂಡಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಪಂದ್ಯಾವಳಿಗೆ ಅನುಮತಿಯ ಬಗ್ಗೆ ಚರ್ಚೆ ನಡೆಯುತ್ತದೆ. ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ ನಿನ್ನೆ ಸರ್ಕಾರಕ್ಕೆ KSCA ಅಧ್ಯಕ್ಷ ವೆಂಕಟೇಶ ಪ್ರಸಾದ್ ಈ ವಿಚಾರವಾಗಿ ಮನವಿ ಸಲ್ಲಿಸಿದ್ದಾರೆ. ಐಪಿಎಲ್ ಮತ್ತು ಅಂತಾರಾಷ್ಟ್ರೀಯ ಪಂದ್ಯಗಳಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಸಿಎಂ ಡಿಸಿಎಂ ಸ್ಪಂದನೆ ನೀಡಿದ್ದು ಇವತ್ತು ಕ್ಯಾಬಿನೆಟ್ ನಲ್ಲಿ ಸಚಿವರ ಜೊತೆ ಸಿದ್ದರಾಮಯ್ಯ ಚರ್ಚೆ ಮಾಡುತ್ತಾರೆ ಎಂದು ತಿಳಿದುಬಂದಿದೆ.
ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸಚಿವರ ಅಭಿಪ್ರಾಯವನ್ನು ಪಡೆಯಲಿದ್ದಾರೆ ಮೊದಲು ಸಾಧಕ ಪಾದಕಗಳ ಬಗ್ಗೆ ಚರ್ಚೆ ನಡೆಯಲಿದೆ , ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಅನುಮತಿ ನೀಡುತ್ತಾ ಅಥವಾ ಇಲ್ಲವ ಎನ್ನುವುದರ ಕುರಿತು ಸಂಪುಟ ಸಭೆಯ ಬಳಿಕ ತಿಳಿಯಲಿದೆ.








