ಬೆಂಗಳೂರು : ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೋಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ. ಈ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದರು. ಹಾಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಕ್ರಿಕೆಟ್ ಪಂದ್ಯ ನಡೆಸದೇ ಇರಲು ನಿರ್ಧರಿಸಲಾಗಿತ್ತು. ಆದರೆ ಇದೀಗ ನಿನ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ ಪಂದ್ಯಾರ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ.
ಹೌದು ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳಿಗೆ ಕೊನೆಗೂ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್ ಸಿಕ್ಕಿದೆ. 2026ರ ಐಪಿಎಲ್ ಸೇರಿದಂತೆ ಮುಂಬರುವ ಎಲ್ಲಾ ಕ್ರಿಕೆಟ್ ಪಂದ್ಯಗಳನ್ನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆಸಲು ಸಚಿವ ಸಂಪುಟ ಬಹುತೇಕ ಒಪ್ಪಿಗೆ ಸೂಚಿಸಿದೆ. ಗೃಹ ಇಲಾಖೆಗೆ ಜವಾಬ್ದಾರಿ ನೀಡಿ ಮೈಕೆಲ್ ಡಿ ಕುನ್ಹಾ ವರದಿಯ ಶಿಫಾರಸುಗಳನ್ನ ಅಳವಡಿಸಿಕೊಂಡು ಪಂದ್ಯಕ್ಕೆ ಅವಕಾಶ ಮಾಡಿಕೊಡಲು ಬೆಳಗಾವಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಪಂದ್ಯಗಳು ನಡೆಯುವ ಸಂದರ್ಭದಲ್ಲಿ ಹೆಚ್ಚಿನ ಭದ್ರತೆ ಒದಗಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಪಂದ್ಯದ ವೇಳೆ ಏನೇನು ಕ್ರಮ ಅನುಸರಿಸಬೇಕು ಅನ್ನೋದರ ಬಗ್ಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿಯು (KSCA) ಗೃಹ ಇಲಾಖೆಯೊಂದಿಗೆ ಚರ್ಚಿಸಬೇಕಿದೆ. ಬಳಿಕ ಗೃಹ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಬಳಿಕ ತೀರ್ಮಾನ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ.








