Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: KPSCಯಿಂದ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

03/03/2026 6:16 AM

ರಾಜ್ಯದ ಹೊಸ ಬಡಾವಣೆಗಳ ನಿವಾಸಿಗಳಿಗೆ ಗುಡ್ ನ್ಯೂಸ್ : `ಇ-ಖಾತೆ’ ಪಡೆಯಲು ಗ್ರಾ.ಪಂ. ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ !

03/03/2026 6:16 AM

ರಾಜ್ಯದಲ್ಲಿ ಖಾಲಿ ಇರುವ 56,000 ಹುದ್ದೆಯನ್ನು ಭರ್ತಿ ಮಾಡಲು ಐತಿಹಾಸಿಕ ನಿರ್ಧಾರ: ಸಚಿವ ಮಧು ಬಂಗಾರಪ್ಪ

03/03/2026 6:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಹೊಸ ಬಡಾವಣೆಗಳ ನಿವಾಸಿಗಳಿಗೆ ಗುಡ್ ನ್ಯೂಸ್ : `ಇ-ಖಾತೆ’ ಪಡೆಯಲು ಗ್ರಾ.ಪಂ. ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ !
KARNATAKA

ರಾಜ್ಯದ ಹೊಸ ಬಡಾವಣೆಗಳ ನಿವಾಸಿಗಳಿಗೆ ಗುಡ್ ನ್ಯೂಸ್ : `ಇ-ಖಾತೆ’ ಪಡೆಯಲು ಗ್ರಾ.ಪಂ. ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ !

By kannadanewsnow5703/03/2026 6:16 AM

ಬೆಂಗಳೂರು: ರಾಜ್ಯದ ಹೊಸ ಬಡಾವಣೆಗಳ ನಿವಾಸಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ಇ-ಖಾತೆ ಪಡೆಯಲು ಈಗ ಗ್ರಾಮ ಪಂಚಾಯಿತಿ ಹಂತದಲ್ಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಪಂಚಾಯತ್ ರಾಜ್ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿ ಮಾತನಾಡಿದ ಸಚಿವರು, ಇ-ಸ್ವತ್ತು 2.0 ತಂತ್ರಾಂಶದಡಿ ರಾಜ್ಯದಲ್ಲಿ ಇದುವರೆಗೆ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ. ಸಾರ್ವಜನಿಕರಿಂದ ಇದುವರೆಗೆ ಒಟ್ಟು 1,38,470 ಅರ್ಜಿಗಳು ಸ್ವೀಕೃತವಾಗಿದ್ದು, 23,563 ಅರ್ಜಿಗಳು ಅನುಮೋದನೆಗಾಗಿ ಬಾಕಿ ಉಳಿದಿವೆ ಎಂದರು.
ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ (Citizen interface) ಮೂಲಕ ಅರ್ಜಿಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಮತ್ತು ಅರ್ಜಿಗಳನ್ನು ಅನುಮೋದನೆ ಮಾಡುವ ಸಮಯದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇ-ಸ್ವತ್ತು ತಂತ್ರಾಂಶವನ್ನು ನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಎನ್ಐಸಿ (NIC) ಸಂಸ್ಥೆ ಮೂಲಕ ಉದ್ಭವಿಸಿರುವ ಇ-ಸ್ವತ್ತು 2.0 ತಂತ್ರಾಂಶದ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಮತ್ತು ಉಳಿದ ಮಾಡ್ಯುಲ್ಗಳನ್ನು ಆದ್ಯತೆ ಮೇರೆಗೆ ಅಭಿವೃದ್ಧಿಪಡಿಸಲು ಕಳೆದ ಜನವರಿಯಲ್ಲಿ ಕೇಂದ್ರದ ಮಾಹಿತಿ ತಂತ್ರಜ್ಞಾನ ಹಾಗೂ ಎಲೆಕ್ಟ್ರಾನಿಕ್ಸ್ ಖಾತೆಯ ಸಚಿವರಿಗೆ ನಾನು ಬರೆದಿದ್ದ ಪತ್ರಕ್ಕೆ ಸಂಬಂಧಿಸಿದಂತೆ, ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಕೆಲವು ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

ಅದರಂತೆ, ಹೊಸ ಬಡಾವಣೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದ್ದು, ಈವರೆಗೆ 478 ಹೊಸ ಬಡಾವಣೆಗಳಿಗೆ ಅರ್ಜಿ ಸಲ್ಲಿಕೆಯಾಗಿದೆ. ಅವುಗಳಲ್ಲಿ 54 ಹೊಸ ಬಡಾವಣೆಗಳಿಗೆ ಗ್ರಾಮ ಪಂಚಾಯತಿ ಹಂತದಲ್ಲಿ ಅನುಮೋದನೆ ನೀಡಲಾಗಿದೆ ಹಾಗೂ ಹೊಸ ಬಹುಮಹಡಿ (ಅಪಾರ್ಟ್ಮೆಂಟ್) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ನಿಯೋಗವೊಂದು ಭೇಟಿಯಾಗಿ ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಸಲ್ಲಿಸುವಾಗ ತಮ್ಮ ಭಾಗದಲ್ಲಿ ಚಾಲ್ತಿಯಲ್ಲಿರುವ ಸೆಂಟ್ಸ್ ಪದ್ದತಿಯಂತೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಕೋರಿತ್ತು. ಅದರಂತೆ ಗುಂಟೆ ಮತ್ತು ಸೆಂಟ್ಸ್ ಅಳತೆಯಲ್ಲಿರುವ ಭೂಮಿಯ ವಿಸ್ತೀರ್ಣವನ್ನು ಚ.ಮೀ.ನಲ್ಲಿ ಪರಿವರ್ತಿಸಿ, ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಹೊಸದಾಗಿ ಅನುಮೋದನೆಗೊಂಡ ಆಸ್ತಿಗಳಿಗೆ ತಿದ್ದುಪಡಿ ಮಾಡುವ ಅವಕಾಶವನ್ನು ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರವನ್ನು ಇ-ಸ್ವತ್ತು ತಂತ್ರಾಂಶದೊಂದಿಗೆ ಸಂಯೋಜನೆ ಮಾಡುವ ಕಾರ್ಯವನ್ನು ಮುಂದಿನ 10 ದಿನದೊಳಗೆ ಮುಗಿಸಲು ಕ್ರಮವಹಿಸಲಾಗುವುದು; ಇ-ಸ್ವತ್ತು ತಂತ್ರಾಂಶದ ಬಳಕೆದಾರರು ಎದುರಿಸುತ್ತಿರುವ ಲಾಗಿನ್ನಲ್ಲಿ ಉಂಟಾಗುತ್ತಿರುವ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರುತ್ತೇನೆ.

ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ತಂತ್ರಾಂಶದಲ್ಲಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ, ಮತ್ತಷ್ಟು ಸರಳೀಕರಿಸಲು ಕ್ರಮವಹಿಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಯಾವುದೇ ಕಾಲಾವಧಿಯನ್ನು ನಿಗದಿಪಡಿಸಿಲ್ಲವಾದ್ದರಿಂದ ಸಾರ್ವಜನಿಕರು ಗ್ರಾಮ ಪಂಚಾಯತಿ ಕಚೇರಿಗೆ ಭೇಟಿ ನೀಡದೆಯೇ ತಾವಿರುವಲ್ಲಿಯೇ ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಮೂನೆಗಳನ್ನು ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಬಹುದಾಗಿದೆ.

ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಇ-ಸ್ವತ್ತು ರಾಜ್ಯ ಸಹಾಯವಾಣಿ 9483476000 ಸಂಪರ್ಕಿಸಬಹುದು. ಜಿಲ್ಲಾ ಸಹಾಯವಾಣಿಗಳ ಸಂಖ್ಯೆಯನ್ನು https://eswathu.karnataka.gov.in/Login.aspx ರಲ್ಲಿ “ಸಂಪರ್ಕಿಸಿ” ಶೀರ್ಷಿಕೆಯಡಿ ಹಾಗೂ https://panchatantra.karnataka.gov.in ರಲ್ಲಿ ಪ್ರಕಟಿಸಲಾಗಿದೆ.

Good news for residents of new settlements in the state: Opportunity to apply at the Gram Panchayat to get an 'e-account'!
Share. Facebook Twitter LinkedIn WhatsApp Email

Related Posts

BREAKING: KPSCಯಿಂದ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

03/03/2026 6:16 AM1 Min Read

ರಾಜ್ಯದಲ್ಲಿ ಖಾಲಿ ಇರುವ 56,000 ಹುದ್ದೆಯನ್ನು ಭರ್ತಿ ಮಾಡಲು ಐತಿಹಾಸಿಕ ನಿರ್ಧಾರ: ಸಚಿವ ಮಧು ಬಂಗಾರಪ್ಪ

03/03/2026 6:15 AM2 Mins Read

BREAKING : ಯುದ್ಧ ಭೂಮಿಯಿಂದ ಬೆಂಗಳೂರಿಗೆ ಬಂದಿಳಿದ 2ನೇ ವಿಮಾನ; 490 ಪ್ರಯಾಣಿಕರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್!

03/03/2026 6:09 AM1 Min Read
Recent News

BREAKING: KPSCಯಿಂದ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

03/03/2026 6:16 AM

ರಾಜ್ಯದ ಹೊಸ ಬಡಾವಣೆಗಳ ನಿವಾಸಿಗಳಿಗೆ ಗುಡ್ ನ್ಯೂಸ್ : `ಇ-ಖಾತೆ’ ಪಡೆಯಲು ಗ್ರಾ.ಪಂ. ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ !

03/03/2026 6:16 AM

ರಾಜ್ಯದಲ್ಲಿ ಖಾಲಿ ಇರುವ 56,000 ಹುದ್ದೆಯನ್ನು ಭರ್ತಿ ಮಾಡಲು ಐತಿಹಾಸಿಕ ನಿರ್ಧಾರ: ಸಚಿವ ಮಧು ಬಂಗಾರಪ್ಪ

03/03/2026 6:15 AM

EPFO BIG Update : ಖಾಸಗಿ & ಸರ್ಕಾರಿ ನೌಕರರಿಗೆ ಹೋಳಿ ಗಿಫ್ಟ್ ; PF ಠೇವಣಿಗಳ ಮೇಲೆ ಹೊಸ ಬಡ್ಡಿದರ ಘೋಷಣೆ

03/03/2026 6:10 AM
State News
KARNATAKA

BREAKING: KPSCಯಿಂದ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

By kannadanewsnow0903/03/2026 6:16 AM KARNATAKA 1 Min Read

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ವೃಂದದ ಒಟ್ಟು 384…

ರಾಜ್ಯದ ಹೊಸ ಬಡಾವಣೆಗಳ ನಿವಾಸಿಗಳಿಗೆ ಗುಡ್ ನ್ಯೂಸ್ : `ಇ-ಖಾತೆ’ ಪಡೆಯಲು ಗ್ರಾ.ಪಂ. ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ !

03/03/2026 6:16 AM

ರಾಜ್ಯದಲ್ಲಿ ಖಾಲಿ ಇರುವ 56,000 ಹುದ್ದೆಯನ್ನು ಭರ್ತಿ ಮಾಡಲು ಐತಿಹಾಸಿಕ ನಿರ್ಧಾರ: ಸಚಿವ ಮಧು ಬಂಗಾರಪ್ಪ

03/03/2026 6:15 AM

BREAKING : ಯುದ್ಧ ಭೂಮಿಯಿಂದ ಬೆಂಗಳೂರಿಗೆ ಬಂದಿಳಿದ 2ನೇ ವಿಮಾನ; 490 ಪ್ರಯಾಣಿಕರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್!

03/03/2026 6:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.