ಬೆಂಗಳೂರು : ರಾಜ್ಯದ ನಿವೃತ್ತ ನೌಕರರಿಗೆ ನಗದುರಹಿತ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಉಲ್ಲೇಖಿತ ತಮ್ಮ ಸಂಘಟನೆಯ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದ್ದು, ಸದರಿ ಪ್ರಸ್ತಾವನೆಯಲ್ಲಿನ ವಿಷಯಗಳ ಪರಿಶೀಲನೆಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಆರ್ಥಿಕ ಇಲಾಖೆಗೆ ಕಳುಹಿಸಲಾಗಿದೆ.
ರಾಜ್ಯ ಸರ್ಕಾರವು ಈ ವರ್ಷ ಈಗಾಗಲೇ, ಸೇವೆಯಲ್ಲಿರುವ ಅಧಿಕಾರಿಗಳಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ನಗದುರಹಿತ ವೈದ್ಯಕೀಯ ಚಿಕಿತ್ಸೆಯ ಯೋಜನೆಯನ್ನು ಕಾರ್ಯಗತಗೊಳಿಸಲು ಸೂಚಿಸಿದ್ದು, ಈ ಯೋಜನೆಯನ್ನು ನಿರ್ವಹಿಸಲು ಕಂಪ್ಯೂಟರ್ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆ ಪುಗತಿಯಲ್ಲಿದೆ ಹಾಗೂ ನೌಕರರ ಅವಲಂಬಿತ ಕುಟುಂಬ ಸದಸ್ಯರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಈ ಪ್ರಕ್ರಿಯೆ ಮುಕ್ತಾಯವಾದ ನಂತರ ತಮ್ಮ ಪ್ರಸ್ತಾವನೆಯನ್ನು ಪರಿಗಣಿಸಲಾಗುವುದು ಎಂದು ಆರ್ಥಿಕ ಇಲಾಖೆಯು ಹಿಂಬರಹವನ್ನು ನೀಡಿರುತ್ತದೆ.