ಬೆಂಗಳೂರು: ರಾಜ್ಯದ ರಬ್ಬರ್ ಬೆಳೆಗಾರರಿಗೆ ಗುಡ್ ನ್ಯೂಸ್ ಎನ್ನುವಂತೆ ತೋಟಗಾರಿಕಾ ಬೆಳೆಗಳ ವ್ಯಾಪ್ತಿಗೆ ಶಿಫಾರಸ್ಸು ಮಾಡೋದಾಗಿ ಸರ್ಕಾರ ತಿಳಿಸಿದೆ.
ರಬ್ಬರ್ ಬೆಳೆಗೆ ಬೆಂಬಲ ಬೆಲೆ ನಿಗದಿಪಡಿಸುವ ಮತ್ತು ಕೃಷಿ ಹವಾಮಾನ ಆಧಾರಿತ ವಿಮೆ ಸೌಲಭ್ಯ ಒದಗಿಸಲು ಇರುವ ಸಾಧ್ಯತೆ ಬಗ್ಗೆ ರಬ್ಬರ್ ಮಂಡಳಿಯು ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ರಬ್ಬರ್ ಬೋರ್ಡ್‌ಗೆ ರಾಜ್ಯ ಸರ್ಕಾರದಿಂದ ಶಿಫಾರಸ್ಸು ಮಾಡಲಾಗುವುದು ಎಂಬುದಾಗಿ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿಶೇಷ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
“ರಬ್ಬರ್ ಬೆಳೆಗೆ ಬೆಂಬಲ ಬೆಲೆ ನಿಗದಿಪಡಿಸುವ ಮತ್ತು ಕೃಷಿ ಹವಾಮಾನ ಆಧಾರಿತ ವಿಮೆ ಸೌಲಭ್ಯ ಒದಗಿಸಲು ಇರುವ ಸಾಧ್ಯತೆ ಬಗ್ಗೆ ರಬ್ಬರ್ ಮಂಡಳಿಯು ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ರಬ್ಬರ್ ಬೋರ್ಡ್‌ಗೆ ರಾಜ್ಯ ಸರ್ಕಾರದಿಂದ ಶಿಫಾರಸ್ಸು ಮಾಡಲಾಗುವುದು.”
ಎಸ್.ಎಸ್.ಮಲ್ಲಿಕಾರ್ಜುನ್, ತೋಟಗಾರಿಕೆ ಸಚಿವರು pic.twitter.com/9aURnSVtol
— DIPR Karnataka (@KarnatakaVarthe) January 31, 2026
ತೆಂಗು ಬೆಳೆಯಲ್ಲಿ ಕಂಡುಬರುವ ಬಿಳಿನೊಣ ಹಾಗೂ ಕೀಟಗಳ ನಿಯಂತ್ರಣಕ್ಕೆ ಕ್ರಮ
“ತೆಂಗು ಬೆಳೆಯಲ್ಲಿ ಕಂಡು ಬರುವ ಕಪ್ಪು ತಲೆಹುಳು ಹಾಗೂ ಬಿಳಿನೊಣ ಕೀಟಗಳ ನಿಯಂತ್ರಣಕ್ಕಾಗಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 23 ಪ್ರಯೋಗ ಶಾಲೆಗಳಲ್ಲಿ ಗೋನಿಯೋಜಸ್ ಎಂಬ ಪರೋಪಜೀವಿಗಳು ಹಾಗೂ ಐಸಿರಿಯಾ ಜೈವಿಕ ಕೀಟನಾಶಕವನ್ನು ಉತ್ಪಾದನೆ ಮಾಡಿ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
BREAKING: ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಆಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ | Sunetra Pawar








