ಬೆಳಗಾವಿ: 22.03.2017ಕ್ಕೂ ಮುನ್ನ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಿಂದ ಹೊರಗಿದ್ದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿಗಳ ಖಾತೆಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ಮುಂದುವರೆಸಲು ಮತ್ತು ಗ್ರಾಮ ಪಂಚಾಯತಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೇಗೇರಿಸಿದ ನಂತರ ಅವುಗಳ ಇ-ಸ್ವತ್ತು ತಂತ್ರಾಂಶ ದಡಿಯಲ್ಲಿ ನಿರ್ವಹಿಸಿದ ಖಾತೆಗಳನ್ನು ಇ- ಆಸ್ತಿ ತಂತ್ರಾಂಶದಲ್ಲಿ ದಾಖಲಿಸಲು ಅವಕಾಶ ನೀಡುವ ಮಹತ್ವದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟದ ಇಂದಿನ ಸಭೆ ಅನುಮೋದನೆ ನೀಡಿದೆ.
ಇದರಿಂದ ರಾಜ್ಯದ ಒಟ್ಟು 302 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 175 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತೆ ನೀಡಿಕೆಗೆ ಇದ್ದ ಅಡೆ-ತಡೆಗಳು ಬಗೆಹರಿಯಲಿವೆ.ಉಳಿದ ನಗರ ಸ್ಥಳೀಯ ಸಂಸ್ಥೆಗಳು ಯೋಜನಾ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಬರುವುದರಿಂದ ಅವುಗಳ ವ್ಯಾಪ್ತಿಯಲ್ಲಿನ ಇ-ಖಾತೆ ಸಮಸ್ಯೆಗಳು ಬಗೆಹರಿಯಲು ಸುಪ್ರೀಂ ಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳ್ಳುವವರೆಗೆ ಕಾಯಬೇಕಾಗುತ್ತದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ತಿಳಿಸಿದ್ದಾರೆ.
ಗ್ರಾಮ ಪಂಚಾಯತಿಯ ಇ-ಸ್ವತ್ತು ಆಸ್ತಿಗಳನ್ನು ಡಿಜಟಲೀಕರಣ ಮಾಡುವಾಗ ಅಧಿಕೃತ ಮತ್ತು ಅನಧಿಕೃತ ಆಸ್ತಿಗಳ ವರ್ಗೀಕರಣ ಮಾಡಲು ಪೌರಾಡಳಿತ ನಿರ್ದೇಶನಾಲಯದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತನ್ನು ವಿಧಿಸಲಾಗಿದೆ. ಇ-ಖಾತೆ ಪ್ರಕ್ರಿಯೆ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಸಚಿವ ಎಂಟಿಬಿ ನಾಗರಾಜು ವಿವರಿಸಿದ್ದಾರೆ.
ಬೆಂಗಳೂರಿನ ‘ರೇನ್ಬೋ ಚಿಲ್ಡ್ರನ್ ಆಸ್ಪತ್ರೆ ಹೆರಿಗೆ ಕೇಂದ್ರ’ವನ್ನು ನಟಿ ಅಮೂಲ್ಯ ಉಧ್ಘಾಟನೆ