ಬೆಂಗಳೂರು: ರಾಜ್ಯ ಸರ್ಕಾರದಿಂದ ಭೂ ಒಡೆತನ ಯೋಜನೆಯ ಅಡಿಯಲ್ಲಿ ಕೃಷಿ ಭೂಮಿ ಇಲ್ಲದಂತ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನು ಖರೀದಿಸಿ, ಸ್ವಾವಲಂಬಿ ಜೀವನ ನಡೆಸೋದಕ್ಕೆ ಸಾಲಸೌಲಭ್ಯಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಮೂಲಕ ಪರಿಶಿಷ್ಟ ಜಾತಿ ಸಮುದಾಯದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಭೂ ಒಡೆತನ ಯೋಜನೆಯು ಸಮಾಜ ಕಲ್ಯಾಣ ಇಲಾಖೆಯಿಂದ ಜಾರಿಗೊಳಿಸಿದಂತ ಯೋಜನೆಯಾಗಿದೆ. ಕೃಷಿ ಭೂಮಿ ಇಲ್ಲದಂತ ಮಹಿಳೆಯರಿಗೆ ಜಮೀನು ಖರೀದಿಗೆ ಸಬ್ಸಿಡಿ ದರದಲ್ಲಿ ಸಹಾಯ ಧನ ಸೌಲಭ್ಯವನ್ನು ಕಲ್ಪಿಸುವಂತ ಯೋಜನೆಯಾಗಿದೆ.
ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಭೂ ರಹಿತ ಕೃಷಿ ಕಾರ್ಮಿಕರ ಪ್ರಮಾಣಪತ್ರ
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿ
- ಪೋಟೋ
ಈ ಹಂತ ಅನುಸರಿಸಿ, ಅರ್ಜಿ ಸಲ್ಲಿಸಿ
2023-24ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆದರೇ ಹೊಸದಾಗಿ ಅರ್ಜಿ ಸಲ್ಲಿಸಲು ಇಷ್ಟಪಡುವವರು, https://sevasindhu.karnataka.gov.in/Sevasindhu/Kannada ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 10-10-2024 ಕೊನೆಯಾಗಿರುತ್ತದೆ.
ಹೀಗಿದೆ ಭೂ ಒಡೆತನ ಯೋಜನೆ ಸಹಾಯ ಧನ ವಿವರ
ಭೂ ಒಡೆತನ ಯೋಜನೆಯ ಅಡಿಯಲ್ಲಿ ಎಸ್ಸಿ ವರ್ಗದ ಮಹಿಳೆಯರಿಗೆ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸೀಮಿತಗೊಂಡಂತೆ ರೂ.25 ಲಕ್ಷ ಹಾಗೂ ಉಳಿದ 26 ಜಿಲ್ಲೆಗಳ ಘಟಕ ವೆಚ್ಚ ರೂ.20 ಲಕ್ಷ ನಿಗದಿ ಪಡಿಸಲಾಗಿದೆ.
ಇನ್ನೂ 25 ಲಕ್ಷ ಹಾಗೂ 20 ಲಕ್ಷ ಘಟಕ ವೆಚ್ಚದಲ್ಲಿ ಶೇ.50ರಷ್ಟು ಸಹಾಯಧನದಲ್ಲಿ ಸಬ್ಸಿಡಿ ನೀಡಲಾಗುತ್ತದೆ. ಶೇ.50ರಷ್ಟು ಸಾಲವಾಗಿರುತ್ತದೆ. ಇದಕ್ಕೆ ವಾರ್ಷಿಕ ಶೇ.6ರಷ್ಟು ಬಡ್ಡಿದರವನ್ನು ನಿಗದಿ ಪಡಿಸಲಾಗಿದೆ. 10 ವರ್ಷಗಳಲ್ಲಿ ವಾರ್ಷಿಕ ಸಮ ಕಂತುಗಳಲ್ಲಿ ಮರು ಪಾವತಿಸುವುದಕ್ಕೆ ಅವಕಾಶ ನೀಡಲಾಗಿದೆ.
ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ 9482300400ಗೆ ಕರೆ ಮಾಡಿ ಪಡೆಯಬಹುದಾಗಿದೆ.