ಬೆಂಗಳೂರು: 2024-25ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಜನರ ಸ್ವಾವಲಂಬನೆಯನ್ನು ಉತ್ತೇಜಿಸಲು, ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಯುವಜನರಿಗೆ ಪೂರಕವಾದ ಉದ್ಯೋಗಗಳನ್ನು ಒದಗಿಸುವ ಸಲುವಾಗಿ ತರಬೇತಿಗೆ 18 ರಿಂದ 40 ವರ್ಷ ಒಳಗಿನ ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆಗಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಸೆ. 19 ರಿಂದ ಅ. 03 ರವರೆಗೆ ಜೆಮ್/ಫಿಟೈಸ್ ತರಬೇತಿ ಹಾಗೂ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಸೆ. 21 ರಿಂದ ಅ.03 ರವರೆಗೆ ಮಹಿಳೆಯರಿಗೆ ಬ್ಯೂಟಿಷಿಯನ್ ತರಬೇತಿ ಶಿಬಿರ ಮತ್ತು ಅ. 04 ರಿಂದ ಅ. 09 ವರೆಗೆ ಚಾಟ್ಸ್ ತಯಾರಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ. 18ರೊಳಗಾಗಿ ಸಲ್ಲಿಸುವಂತೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯನ್ನು ಸಂಪರ್ಕಿಸುವುದು.
BREAKING: ‘ಆಧಾರ್ ಕಾರ್ಡ್ ಅಪ್ ಡೇಟ್’ ಮಾಡದವರಿಗೆ ಗುಡ್ ನ್ಯೂಸ್: ಡಿ.14ರವರೆಗೆ ಉಚಿತ ನವೀಕರಣದ ಅವಧಿ ವಿಸ್ತರಣೆ