ಬೆಂಗಳೂರು: 2025-26ನೇ ಸಾಲಿಗೆ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಪ್ರತಿಷ್ಠಿತ ಶಾಲೆಗಳ ವಿದ್ಯಾರ್ಥಿಗಳ ಆಯ್ಕೆ ಸಮಿತಿಗೆ ಪತ್ರದಲ್ಲಿ ಸೂಚಿಸಲಾಗಿದೆ.
2025-26ನೇ ಸಾಲಿಗೆ ಪ್ರತಿಷ್ಠಿತ ಶಾಲೆ ಯೋಜನೆಯಡಿ ಪ್ರರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಅರ್ಹತಾ ಪರೀಕ್ಷೆಗೆ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು, ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆಯ ಸಂಬಂಧ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಪ್ರಕಟಿತ ವೇಳಾಪಟ್ಟಿಯಂತೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿದೆ ದಿನಾಂಕ 15-04-2025ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-05-2025 ಆಗಿದೆ. ಅರ್ಜಿಗಳ ಪರಿಶೀಲನೆ ದಿನಾಂಕ 05-05-2025ರಂದು ನಡೆಯಲಿದೆ. ಪ್ರವೇಶ ಪರೀಕ್ಷೆಯು ದಿನಾಂಕ 09-05-2025ರಂದು ನಿಗದಿ ಪಡಿಸಲಾಗಿದೆ. ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 13-05-2025ರಂದು ಮಾಡಲಾಗುತ್ತದೆ.
ಇನ್ನೂ ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ದಿನಾಂಕ 17-05-2025ರಂದು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಶಾಲೆಗಳಿಗೆ ದಿನಾಂಕ 31-05-2025 ದಾಖಲಾಗಲು ಕೊನೆಯ ದಿನವಾಗಿದೆ.
ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ – ಬನಾರಸ್- ಹುಬ್ಬಳ್ಳಿ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ
BREAKING : ರಾಜ್ಯಸಭೆಯಲ್ಲೂ ಮಹತ್ವದ `ವಕ್ಫ್ ತಿದ್ದುಪಡಿ’ ಮಸೂದೆ ಅಂಗೀಕಾರ | Waqf Amendment Bill 2025