ಬೆಂಗಳೂರು : ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು 2024-25ನೇ ಸಾಲಿನ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟಿ ಜಾತಿ ಅಭ್ಯರ್ಥಿಗಳಿಂದ ರಾಷ್ಟೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ (NOS)ಗೆ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪದವಿ. ಪಿಎಚ್‌ಡಿ ಉನ್ನತ ವ್ಯಾಸಂಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿhttps://overseas.tribal.gov.in ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 31 ರಂದು ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ 8352276124 ಗೆ ಸಂಪರ್ಕಿಸಬಹುದಾಗಿ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.