ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರದಿಂದ ಶೇ.75ರಷ್ಟು ಸಬ್ಸಿಡಿಯಲ್ಲಿ ಸಹಾಯಧನದಲ್ಲಿ ಗೂಡ್ಸ್ ವಾಹನ, ಟ್ಯಾಕ್ಸಿ ಖರೀದಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯಿಂದ ಸ್ವಾಲಂಭಿ ಸಾರಥಿ ಯೋಜನೆ ಅಡಿಯಲ್ಲಿ ಸರಕು ಸಾಗಾಣಿಕೆ, ಟ್ಯಾಕ್ಸಿ, ಹಳದಿ ಬೋರ್ಡ್ ವಾಹನವನ್ನು ಸಬ್ಸಿಡಿ ದರದಲ್ಲಿ ಖರೀದಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಕ್ಟೋಬರ್.10, 2024 ಲಾಸ್ಟ್ ಡೇಟ್ ಆಗಿದೆ.
ಅಂದಹಾಗೇ ಶೇ.75ರಷ್ಟು ಅಥವಾ ಗರಿಷ್ಠ 4 ಲಕ್ಷಗಳವರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಎಸ್ಸಿ, ಎಸ್ಟಿ ಸಮುದಾಯದವರಿಗೆ ಸಹಾಯಧನವನ್ನು ನೀಡಲಾಗುತ್ತದೆ. ಈ ಸಹಾಯಧನದಲ್ಲಿ ವಾಹನವನ್ನು ಖರೀದಿ ಮಾಡಬಹುದಾಗಿದೆ.
ಸ್ವಾವಲಂಬಿ ಸಾರಥಿ ಯೋಜನೆ
ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.
ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು
ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು. ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,. ಡ್ರೈವಿಂಗ್ ಲೈಸೆನ್ಸ್ ಇರಬೇಕು. ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.
ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ ವರ್ಗದವರಾಗಿರಬೇಕು.
ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ
(DL) ಡ್ರೈವಿಂಗ್ ಲೈಸೆನ್ಸ್
ಫೋಟೋ
ಮೊಬೈಲ್ ನಂಬರ್
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ SC, ST ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!
ಮುಂದಿನ ಮೂರು ಮುಕ್ಕಾಲು ವರ್ಷ ‘ಸಿದ್ಧರಾಮಯ್ಯ’ ಅವರೇ ಮುಖ್ಯಮಂತ್ರಿ: ಸಚಿವ ಈಶ್ವರ್ ಖಂಡ್ರೆ