ಬೆಂಗಳೂರು: ರಾಜ್ಯದ 3.78 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ( Scheduled Castes and Scheduled Tribes ) ಕುಟುಂಬಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ರಾಜ್ಯ ಸರ್ಕಾರದ ವಿನೂತನ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನಾಳೆ ಉದ್ಘಾಟಿಸಲಿದ್ದಾರೆ.

ರಾಜ್ಯದ ಎಲ್ಲಾ ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬಿಪಿಎಲ್ ಕಾರ್ಡ ( BPL Card ) ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಳ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ( 75 units of free electricity ) ನೀಡುವ ಯೋಜನೆ ಇದಾಗಿದೆ.

ಶಿವಮೊಗ್ಗ: ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಯೋಜನೆ ಕುರಿತು ರಾಜ್ಯದ ಎಲ್ಲಾ ಎಸ್ಕಾಂಗಳು ಎಸ್ ಸಿ-ಎಸ್ ಟಿ ಗ್ರಾಹಕರಿಗೆ ಅರಿವು ಮೂಡಿಸಿದ್ದು ವಿದ್ಯುತ್ ಮೀಟರ್ ಮಾಪಕರು ಮತ್ತು ಗ್ರಾಮ ವಿದ್ಯುತ್ ಪ್ರತಿನಿಧಿಗಳು ಮನೆ ಮನೆಗೆ ತೆರಳಿ ಈ ಯೋಜನೆಯ ಕುರಿತು ಕರ ಪತ್ರಗಳನ್ನು ಹಂಚಿದ್ದಾರೆ.

ಬೆಸ್ಕಾಂ, ಸೆಸ್ಕಾಂ, ಜೆಸ್ಕಾಂ, ಹೆಸ್ಕಾಂ ಮತ್ತು ಮೆಸ್ಕಾಂ ಕಂಪನಿಗಳು ಈಗಾಗಲೇ ಈ ಕುರಿತು ಅರಿವು ಮೂಡಿಸುವ ಅಭಿಯಾನವನ್ನು ಆರಂಭಿಸಿದ್ದು, ಎಸ್ಸಿ ಎಸ್ಟಿ ಗ್ರಾಹಕರು ಯೋಜನೆ ಲಾಭ ಪಡೆಯಲು ಉತ್ಸುಹಕರಾಗಿದ್ದಾರೆ.

BIG NEWS: ‘ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ’ದ ಬಗ್ಗೆ ‘ಸಿಎಂ ಬಸವರಾಜ ಬೊಮ್ಮಾಯಿ’ ಹೇಳಿದ್ದೇನು ಗೊತ್ತಾ.?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಾ. ಬಿ.ಆರ್ .ಅಂಬೇಡ್ಕರ್ 115 ನೇ ಜಯಂತಿಯಂದು ಈ ಯೋಜನೆಯನ್ನು ಘೋಷಣೆ ಮಾಡಿದ್ದರು. ಈ ಯೋಜನೆ ಜುಲೈ ತಿಂಗಳಿಂದ ಬೆಸ್ಕಾಂನ 8 ಜಿಲ್ಲೆಯಲ್ಲಿ ಕಾರ್ಯಗತಗೊಂಡಿದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳು ತಾವು ಬಳಸುವ ವಿದ್ಯುತ್ ಪ್ರಮಾಣದಲ್ಲಿ 75 ಯೂನಿಟ್ ನವರೆಗೆ ಉಚಿತವಾಗಿ ಪಡೆಯಲಿದೆ.

75 ಯೂನಿಟ್ ವರೆಗಿನ ವಿದ್ಯುತ್ ಶುಲ್ಕದ ಮೊತ್ತವನ್ನು ಎಸ್. ಸಿ-ಎಸ್.ಟಿ ಗ್ರಾಹಕರಿಗೆ ಡಿಬಿಟಿ ಮೂಲಕ ಸರ್ಕಾರ ಪಾವತಿಸಲಿದೆ. ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರವನ್ನು ಗ್ರಾಹಕರು ಒದಗಿಸಿ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.

BIGG NEWS : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಸಿಹಿಸುದ್ದಿ : `ಶುಭ ಲಗ್ನ’ ಸಾಮೂಹಿಕ ವಿವಾಹ ಯೋಜನೆಗೆ ಚಿಂತನೆ!

ಬೆಸ್ಕಾಂ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗ್ರಾಹಕರ ಸಂಖ್ಯೆ ಮತ್ತು ಅವರು ಪ್ರತಿ ತಿಂಗಳು ಬಳಸಿರುವ 75 ಯೂನಿಟ್ ಗೆ ಸರ್ಕಾರದಿಂದ ಪಾವತಿಸಬೇಕಾದ ಸಬ್ಸಿಡಿ ಮೊತ್ತದ ಮಾಹಿತಿ ಕ್ರೋಡಿಕರಿಸಲು ಬೆಸ್ಕಾಂ ಸಾಫ್ಟ್ ವೇರ್ ಒಂದನ್ನುಅಭಿವೃದ್ದಿ ಪಡಿಸಿದೆ.

Share.
Exit mobile version