ದಾವಣಗೆರೆ : ರಾಜ್ಯದ SC, ST ಯವರಿಗೆ ನಿವೇಶನ ಕೊಡುವ ಸ್ಕೀಮ್ಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಎಲ್ಲೆಲ್ಲಿ ಸರ್ಕಾರಿ ಜಾಗಗಳಿವೆ ಅವುಗಳನ್ನು ಗುರುತಿಸಿ ಅಭಿವೃದ್ಧಿ ಮಾಡಿ, ಸೈಟ್ ಕೊಡುವ ಕೆಲಸ ಮಾಡುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೋಳಿ ತಿಳಿಸಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಒಳ್ಳೆಯ ಬಜೆಟ್ ನಿರೀಕ್ಷೆ ಮಾಡಿದ್ದೇವೆ. ನಿಂದ ಇಡೀ ರಾಜ್ಯಕ್ಕೆ ಒಳ್ಳೆಯದಾಗಲಿದೆ. ಸಾಮಾನ್ಯವಾಗಿ ಬಜೆಟ್ನಲ್ಲಿ 10 ರಿಂದ 20 ಸಾವಿರ ಕೋಟಿಯಷ್ಟು ಪ್ರತಿ ವರ್ಷ ಹೆಚ್ಚಾಗುತ್ತದೆ. ಇದು ರಾಜ್ಯದ ಅಭಿವೃದ್ಧಿಗೆ ನೆರವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದರು.








