ಬೆಂಗಳೂರು: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಗೃಹ ಬಳಕೆಯ ʼಅಮೃತ ಜ್ಯೋತಿʼ ಉಚಿತ ವಿದ್ಯುತ್ ಯೋಜನೆಯನ್ನು ರದ್ದು ಪಡಿಸಿಲ್ಲ ಎಂದು ಬೆಸ್ಕಾಂ ( BESCOM ) ಸ್ಪಷ್ಟಪಡಿಸಿದೆ. ಈ ಮೂಲಕ ರಾಜ್ಯದ ಎಸ್ಸಿ, ಎಸ್ಟಿ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
BIGG BREAKING NEWS : ಅಂತಾರಾಷ್ಟ್ರೀಯ ಕ್ರಿಕೆಟ್ `ಸುರೇಶ್ ರೈನಾ’ ನಿವೃತ್ತಿ ಘೋಷಣೆ
ಈ ಕುರಿತಂತೆ ಬೆಸ್ಕಾಂ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಆಗಸ್ಟ್ 24, 2022 ರಂದು ಹೊರಡಿಸಿದ್ದ ಮಾರ್ಗಸೂಚಿ ಸುತ್ತೋಲೆಯನ್ನು ಇ-ಆಡಳಿತ ಇಲಾಖೆಯು ಭಾಗಶ: ಪರಿಷ್ಕರಿಸಿದ್ದರಿಂದ ಸುತ್ತೋಲೆಯನ್ನು ಸೆಪ್ಟೆಂಬರ್ 3, 2022 ರಂದು ಹಿಂಪಡೆಯಲಾಗಿದೆಯೇ ಹೊರತು, ಯೋಜನೆಯನ್ನು ರದ್ದು ಪಡಿಸಿಲ್ಲ ಎಂದು ತಿಳಿಸಿದೆ.
ಬಿಪಿಎಲ್ ಕುಟುಂಬದ ಎಸ್ಸಿ -ಎಸ್ಟಿ ಗ್ರಾಹಕರಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಅಮೃತ ಜ್ಯೋತಿ ವಿದ್ಯುತ್ ಯೋಜನೆಯನ್ನು ರಾಜ್ಯ ಸರಕಾರದ ಮೇ 18, 2022 ರಂದು ರಾಜ್ಯಾದ್ಯಂತ ಜಾರಿಗೆ ತಂದಿತ್ತು. ಈ ಯೋಜನೆಯ ಪ್ರಯೋಜನವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಸುಲಭ ಮತ್ತು ಸುಲಲಿತವಾಗಿ ಅನುಷ್ಠಾನಗೊಳಿಸಲು ಇ-ಆಡಳಿತ ಇಲಾಖೆಯು ಹೊಸ ಆಪ್ ಒಂದನ್ನು ಅಭಿವೃದ್ದಿಪಡಿಸುತ್ತಿದೆ ಎಂದು ಹೇಳಿದೆ.
ಈ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂಬ ತಪ್ಪು ಮಾಹಿತಿಯು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ. ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ.
ಈ ಯೋಜನೆಯ ಪ್ರಯೋಜನ ಸುಮಾರು 39 ಲಕ್ಷ ಬಿಪಿಎಲ್ ಕುಟುಂಬಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗ್ರಾಹಕರಿಗೆ ಸಿಗಲಿದ್ದು, ಈಗಾಗಲೇ 4 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದೆ. ಮೇ ಮತ್ತು ಜೂನ್ ತಿಂಗಳ ವಿದ್ಯುತ್ ಬಿಲ್ ಮೊತ್ತವನ್ನು ವನ್ನು ಸುಮಾರು 15000 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಮರುಪಾವತಿಸಲಾಗಿದೆ ಎಂದು ಹೇಳಿದೆ.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ಯೋಜನೆಯನ್ನು ಇ-ಆಡಳಿತ ಇಲಾಖೆಯ ಸಹಯೋಗದೊಂದಿಗೆ ಡಿಬಿಟಿ ವ್ಯವಸ್ಥೆಯಡಿ ಜಾರಿಗೊಳಿಸಲಾಗಿದೆ. ಫಲಾನುಭವಿ ಗ್ರಾಹಕರಿಗೆ ತಾವು ಪಾವತಿಸಿದ ಒಟ್ಟು ವಿದ್ಯುತ್ ಬಿಲ್ಲಿನ ಮೊತ್ತದಲ್ಲಿ 75 ಯೂನಿಟ್ ಗಳ ವರೆಗಿನ ವಿದ್ಯುತ್ ಶುಲ್ಕದ ಮೊತ್ತವನ್ನು ಅವರ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದೆ.
BIGG NEWS : ವಿದ್ಯುತ್, ಶಿಕ್ಷಣ ಕ್ಷೇತ್ರದಲ್ಲಿ ಭಾರತ-ಬಾಂಗ್ಲಾ ಒಪ್ಪಂದ : ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ