ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಎಎಸ್ ಪ್ರಿಲಿಮ್ಸ್ ಪಾಸ್ ಮಾಡಿದಂತ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಮೆಯನ್ಸ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಸಂಬಂಧ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಅಧಿಸೂಚನೆ ಹೊರಡಿಸಲಾಗಿದೆ. ತಮ್ಮ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಕೆ ಎ ಎಸ್ ಮೆಯನ್ಸ್ ಪರೀಕ್ಷೆಗೆ ತರಬೇತಿ ನೀಡಲಾಗುವುದು ಅಂತ ತಿಳಿಸಿದೆ.
2024-25ರ ಕೆ ಎ ಎಸ್ ಪ್ರಿಲಿಮ್ಸ್ ಉತ್ತೀರ್ಣರಾದಂತ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇದು ಕೆ ಎ ಎಸ್ ಮೆಯನ್ಸ್ ಪರೀಕ್ಷೆ ತರಬೇತಿಯಾಗಿದೆ. ತರಬೇತಿ ಬಯಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ.5 ಲಕ್ಷ ಮೀರಿರಬಾರದು ಅಂತ ಹೇಳಿದೆ.
ಕೆಎಎಸ್ ಮೆಯನ್ಸ್ ಉಚಿತ ತರಬೇತಿಗಾಗಿ ಅರ್ಜಿ ಸಲ್ಲಿಸ ಬಯಸುವಂತ ಎಸ್ಸಿ, ಎಸ್ಟಿ ಅಭ್ಯರ್ಥಿಗಳು ಕೆಎಎಸ್ ಪ್ರಿಲಿಮ್ಸ್ ಪ್ರವೇಶ ಪತ್ರ, ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರದೊಂದಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ದಿನಾಂಕ 20-02-2025ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಇನ್ನೆರಡು ದಿನಗಳಲ್ಲಿ ಸ್ಥಳ ಘೋಷಣೆ: ಡಿಸಿಎಂ ಡಿಕೆಶಿ
BREAKING : ‘ಮುಡಾ’ ಅಕ್ರಮ ಹಗರಣ : ಲೋಕಾಯುಕ್ತ ಎಸ್.ಪಿ ಇಂದ ಐಜಿಪಿಗೆ ಅಂತಿಮ ತನಿಖಾ ವರದಿ ಸಲ್ಲಿಕೆ