Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ​ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ: ತಹರಾನ್, ಫಾರ್ಸ್ ಸೇರಿ ಹಲವು ನಗರಗಳ ಮೇಲೆ ಮುಗಿಬಿದ್ದ ಯುಎಸ್ ಯುದ್ಧ ವಿಮಾನಗಳು!

BIG NEWS : `ಚೆಕ್ ಬೌನ್ಸ್ ಕೇಸ್’ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

​ಜಾಗತಿಕ ಯುದ್ಧದ ಭೀತಿ: ‘ಹೊರ್ಮುಜ್ ಜಲಸಂಧಿ’ ಸಂಪೂರ್ಣ ಬಂದ್ ಎಂದ ಇರಾನ್ ಸೇನೆ; ತೈಲ ಮಾರುಕಟ್ಟೆಗೆ ಭಾರಿ ಆಘಾತ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘SC, ST ಸಮುದಾಯದ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಸ್ಪರ್ಧಾತ್ಮಕ ತರಬೇತಿ ಭತ್ಯೆ’ ಹೆಚ್ಚಳ
KARNATAKA

‘SC, ST ಸಮುದಾಯದ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಸ್ಪರ್ಧಾತ್ಮಕ ತರಬೇತಿ ಭತ್ಯೆ’ ಹೆಚ್ಚಳ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಎಸ್ಸಿ, ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರವು ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ನೀಡಲಾಗುತ್ತಿದ್ದಂತ ಭತ್ಯೆಯನ್ನು ಹೆಚ್ಚಳ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಈ ಸಂಬಂಧ ಮಾಹಿತಿ ನೀಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, IAS, IRS ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ sC/st ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು) ದೆಹಲಿ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಮಾಡಲಾಗುವುದು. ಅಲ್ಲಿ ಎಲ್ಲಾ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆ ಕಲ್ಪಿಸಲಾಗುವುದು ಘೋಷಣೆ ಮಾಡಿದ್ದಾರೆ.

SCSP/TSP ಪರಿಷತ್ ಸಭೆಯ ಕೊನೆಯಲ್ಲಿ ಮುಖ್ಯಮಂತ್ರಿಗಳು ಇಲಾಖೆಯ ಅಧಿಕಾರಿಗಳಿಗೆ ಕೊಟ್ಟ ಸ್ಪಷ್ಟ ಸೂಚನೆಗಳು…

*2024-25 ನೇ ಸಾಲಿಗೆ scsp/tsp ನಲ್ಲಿ ಲಭ್ಯ ಇರುವ ಹಣವನ್ನು ಖರ್ಚು ಮಾಡಲು action plan ಅನುಮೋದನೆ ಮಾಡಲಾಗಿದೆ.

*ರಾಜ್ಯದ ಅಭಿವೃದ್ಧಿ ಆಯವ್ಯಯ ಈ ಸಾಲಿನಲ್ಲಿ ಒಟ್ಟು 160000 ಕೋಟಿ. ಇದರಲ್ಲಿ scsp/tsp ಗೆ ಸುಮಾರು 39121.46 ಕೋಟಿ scsp/tsp ಅಡಿ 34 ಇಲಾಖೆಗಳಿಗೆ ಹಂಚಿಕೆ ಮಾಡಿರುವ ಹಣ action plan ನಲ್ಲಿದೆ.

*ಹಿಂದಿನ ವರ್ಷ 97.81 ಕೋಟಿ ಉಳಿತಾಯವಾಗಿದೆ. ಈ ಹಣವೂ ಸೇರಿದೆ.

*ಕಳೆದ ವರ್ಷಕ್ಕಿಂತ ಈ ವರ್ಷ 3900 ಕೋಟಿ ಹೆಚ್ಚಾಗಿದೆ. 3900 ಕೋಟಿ ಹೆಚ್ಚುವರಿ ಹಣ ಈ ವರ್ಷ ನೀಡಿದ್ದೇವೆ. ಈ ಹಣ ಇಲಾಖೆಗಳಿಗೆ ಹಂಚಿಕೆಯಾಗಿದ್ದು ಇದರ ಸದುಪಯೋಗ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ನಿಗಮಗಳು ಕಾಯ್ದೆಯ ಉದ್ಸೇಶಕ್ಕೆ ಪೂರಕವಾಗಿ ಕೆಲಸ ಮಾಡಬೇಕು.

*ಶೇ100 ಸಾಧನೆ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ.

*ಕಾಯ್ದೆಯಲ್ಲಿದ್ದ 7D ರದ್ದು ಮಾಡಿದ ರೀತಿಯಲ್ಲೇ 7C ಕೂಡ ರದ್ದು ಮಾಡಬೇಕು ಎನ್ನುವ ಶಾಸಕ ನರೇಂದ್ರಸ್ವಾಮಿ ಅವರು ಸಲಹೆ ನೀಡಿದ್ದಾರೆ. ಈ ಸಲಹೆಯ ಸಾಧಕ ಬಾದಕಗಳನ್ನು ಪರಿಶೀಲಿಸಲಾಗುವುದು ಎಂದರು.

*ಖಾಲಿ ಇರುವ ಹೋಬಳಿಗಳಲ್ಲೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಆರಂಭಿಸಲೇಬೇಕು.

*ಆಯಾ ಹೋಬಳಿಯ ವಿದ್ಯಾರ್ಥಿಗಳಿಗೆ ಶೇ75 ರಷ್ಟು ಸೀಟು, ಉಳಿದ ಶೇ25 ರಷ್ಟು ಸೀಟುಗಳನ್ನು ಇತರೆ ಪ್ರದೇಶದ ವಿಧ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ನೀಡಬೇಕು.

*ಸರ್ಕಾರಿ ಶಾಲೆಗಿಂತ ಕ್ರೈಸ್ ನಲ್ಲಿ ಓದಿರುವ ಬಡ ವಿಧ್ಯಾರ್ಥಿನಿ ಕ್ರೈಸ್ ಶಾಲೆಯಲ್ಲಿ ಓದಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಇದನ್ನು ಪ್ರೋತ್ಸಾಹಿಸುತ್ತಲೇ ಇತರೆ ನ್ಯೂನ್ಯತೆಗಳನ್ನು ಸರಿಪಡಿಸಲು ಅಧಿಕಾರಿಗಳು ಶ್ರಮಿಸಬೇಕು.

*ಬಜೆಟ್ ನಲ್ಲಿ ನಾವು ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನೂ ನೀವು ಜಾರಿ ಮಾಡಲೇಬೇಕು.

*ಹಿಂದಿನ ಬಿಜೆಪಿ ಸರ್ಕಾರ ಮೂರು ವರ್ಷ ಕ್ರೈಸ್ ಮಕ್ಕಳಿಗೆ ಬಾತ್ ರೂಮ್ ಕಿಟ್ ಕೊಡ್ಲೇ ಇಲ್ಲ. ಈಗ ನಾವು ಸರಿಯಾಗಿ ವಿತರಿಸುತ್ತಿದ್ದೇವೆ.

*ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಾರೆ ಎನ್ನುವುದು ಕಂಡುಬಂದಿದೆ. ಇದಕ್ಕೆ ಅವಕಾಶ ಆಗಬಾರದು. ಮನೆಗೆ ಕರೆದೊಯ್ಯದಂತೆ ಪೋಷಕರಿಗೆ ಒಪ್ಪಿಸಬೇಕು.

*ಹಳ್ಳಿಗಾಡು, ಬಡ ಕುಟುಂಬಗಳಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸರಿಯಾಗಿ ತಲುಪಿಸಬೇಕು. ಇದರಲ್ಲಿ ವಿಫಲರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

*ನಾವು ಕೊಟ್ಟ ಅನುದಾನ ಆಯಾ ಉದ್ದೇಶಗಳಿಗೇ ಬಳಕೆಯಾಗಬೇಕು.

*ಇದರಲ್ಲಿ ಯಾವುದೇ ರಾಜಿ ಇಲ್ಲದಂತೆ ಆಯಾ ಸಮುದಾಯಗಳಿಗೆ ಸವಲತ್ತು ತಲುಪಿಸಬೇಕು.

*ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸದಿದ್ದರೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗುವುದು.

*10 ವರ್ಷದಲ್ಲಿ ಈ ಯೋಜನೆಯಿಂದ ಸಮುದಾಯದ ಮೇಲೆ ಬೀರಿರುವ ಪರಿಣಾಮ, ಸಮುದಾಯಕ್ಕೆ ಯೋಜನೆ ತಲುಪಿರುವ ಪ್ರಮಾಣದ ಬಗ್ಗೆ, ಹಾಗೂ ಅವರ ಆರ್ಥಿಕ‌ ಸ್ಥಿತಿ ಪ್ರಗತಿ ಆಗಿರುವ ಬಗ್ಗೆ ಮೌಲ್ಯಮಾಪನ ಮಾಡಲಾಗುವುದು.

*3 ತಿಂಗಳ ಬಳಿಕ ಮತ್ತೊಮ್ಮೆ ಪರಿಷತ್ ಸಭೆ ಕರೆಯುತ್ತೇವೆ. ಯಾರಿಂದ ಲೋಪ ಆಗಿದೆ ಎಂದು ಗೊತ್ತಾದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು.

*IAS, IRS ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ sC/st ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು) ದೆಹಲಿ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಮಾಡಲಾಗುವುದು. ಅಲ್ಲಿ ಎಲ್ಲಾ ರೀತಿಯ ಪುಸ್ತಕಗಳು ಸಿಗಬೇಕು.

ಈ ವರ್ಷದ action plan ಅನ್ನು ಈ ಸಭೆಯಲ್ಲಿ ಶಾಸಕರು/ಸಚಿವರು/ ಅಧಿಕಾರಿಗಳು ನೀಡಿದ ಸಲಹೆಗಳ ಸಮೇತ ಜಾರಿ ಆಗಬೇಕು ಎನ್ನುವ ಸೂಚನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೀಡಿದರು.

BREAKING: ‘ನೀಟ್ ಪಿಜಿ-2024ರ ಪರೀಕ್ಷೆ’ಗೆ ದಿನಾಂಕ ಪ್ರಕಟ: ಆ.11ರಂದು ‘ಎರಡು ಪಾಳಿ’ಯಲ್ಲಿ ಪರೀಕ್ಷೆ ನಿಗದಿ | NEET PG 2024

BIG NEWS : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸಿ.ಪಿ.ಯೋಗೇಶ್ವ‌ರ್‌ ಬಿಜೆಪಿ ಅಭ್ಯರ್ಥಿ?

Share. Facebook Twitter LinkedIn WhatsApp Email

Related Posts

BIG NEWS : `ಚೆಕ್ ಬೌನ್ಸ್ ಕೇಸ್’ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

1 Min Read

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜೈಲು ಪಾಲಾಗಿ ಇಂದಿಗೆ 2 ವರ್ಷ.!

2 Mins Read

BIG NEWS: ಗೃಹಲಕ್ಷ್ಮಿಯರಿಗೆ ಹೊಸ ನಿಯಮ : 2000 ರೂ.ಪಡೆಯಲು ಬಯೋಮೆಟ್ರಿಕ್ ಕಡ್ಡಾಯ, ಅರ್ಜಿ ನವೀಕರಣಕ್ಕೆ ಚಾಲನೆ

2 Mins Read
Recent News

BREAKING: ​ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ: ತಹರಾನ್, ಫಾರ್ಸ್ ಸೇರಿ ಹಲವು ನಗರಗಳ ಮೇಲೆ ಮುಗಿಬಿದ್ದ ಯುಎಸ್ ಯುದ್ಧ ವಿಮಾನಗಳು!

BIG NEWS : `ಚೆಕ್ ಬೌನ್ಸ್ ಕೇಸ್’ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

​ಜಾಗತಿಕ ಯುದ್ಧದ ಭೀತಿ: ‘ಹೊರ್ಮುಜ್ ಜಲಸಂಧಿ’ ಸಂಪೂರ್ಣ ಬಂದ್ ಎಂದ ಇರಾನ್ ಸೇನೆ; ತೈಲ ಮಾರುಕಟ್ಟೆಗೆ ಭಾರಿ ಆಘಾತ!

​ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಆಕ್ರೋಶ: ರಾವಲಾಕೋಟ್‌ನಲ್ಲಿ ಭದ್ರತಾ ಪಡೆಗಳ ವಿರುದ್ಧ ಸಾವಿರಾರು ಜನರಿಂದ ಬೃಹತ್ ಪ್ರತಿಭಟನೆ!

State News
KARNATAKA

BIG NEWS : `ಚೆಕ್ ಬೌನ್ಸ್ ಕೇಸ್’ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

By kannadanewsnow57 KARNATAKA 1 Min Read

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಪ್ರಮುಖವಾದ ತೀರ್ಪೊಂದನ್ನು ನೀಡಿದೆ. ಚೆಕ್ ಬೌನ್ಸ್ ಆದಾಗ ವಿಧಿಸಲಾಗುವ…

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜೈಲು ಪಾಲಾಗಿ ಇಂದಿಗೆ 2 ವರ್ಷ.!

BIG NEWS: ಗೃಹಲಕ್ಷ್ಮಿಯರಿಗೆ ಹೊಸ ನಿಯಮ : 2000 ರೂ.ಪಡೆಯಲು ಬಯೋಮೆಟ್ರಿಕ್ ಕಡ್ಡಾಯ, ಅರ್ಜಿ ನವೀಕರಣಕ್ಕೆ ಚಾಲನೆ

ವಾಹನ ಸವಾರರಿಗೆ ಸುವರ್ಣಾವಕಾಶ: ಸಂಚಾರ ಇ-ಚಲನ್, ಸಾರಿಗೆ ಇಲಾಖೆ ಬಾಕಿ ದಂಡ ಪಾವತಿಗೆ ಶೇ.50 ರಿಯಾಯಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.