ಬೆಂಗಳೂರು: 2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಬ್ ಇನ್ಸ್ ಪೆಕ್ಟರ್, ಪ್ಯಾರಾ ಮಿಲಿಟರಿ ಪೂರ್ವ ನೇಮಕಾತಿ ತರಬೇತಿ ನೀಡಲಾಗುತ್ತದೆ. ಅಲ್ಲದೇ ರಾಜ್ಯದ 4 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 75 ದಿನಗಳ ವಸತಿಯುತ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಬೆಂಗಳೂರಿನ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ಮುಖ್ಯ ಆಡಳಿತಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ.2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವಸತಿಯುತ, ಸಬ್ ಇನ್ಸೆಕ್ಟರ್ (PSI)/ಪ್ಯಾರ ಮಿಲಿಟರಿ ಪೂರ್ವ-ನೇಮಕಾತಿ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದಿದ್ದಾರೆ.
ವಸತಿಯುತ, ಸಬ್ ಇನ್ಸೆಕ್ಟರ್ (PSI)/ಪ್ಯಾರ ಮಿಲಿಟರಿ ಪೂರ್ವ-ನೇಮಕಾತಿ ತರಬೇತಿಯ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿದೆ.
ಸಬ್ ಇನ್ಸ್‌ಕ್ಟ (PSI)/ಪ್ಯಾರ ಮಿಲಿಟರಿ ಪೂರ್ವ-ನೇಮಕಾತಿ ತರಬೇತಿ ವಿವರ
ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವಸತಿಯುತ, ಸಬ್ ಇನ್ಸೆಕ್ಟರ್ (PSI)/ಪ್ಯಾರ ಮಿಲಿಟರಿ ಪೂರ್ವ-ನೇಮಕಾತಿ ತರಬೇತಿ ನೀಡುವ ಸಂಬಂಧ ಕರ್ನಾಟಕ ರಾಜ್ಯದ 04 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 75 ದಿನಗಳ ವಸತಿಯುತ ತರಬೇತಿ ನೀಡಲಾಗುವುದು.
ವಯಸ್ಸು – ಕನಿಷ್ಠ 21 ವರ್ಷ, ಗರಿಷ್ಠ 32 ವರ್ಷ. ಸೇವಾನಿರತವಾಗಿರುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ವಿದ್ಯಾರ್ಹತೆ- ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಯು.ಜಿ.ಸಿ ಇಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ (Degree) ಅಥವಾ ತತ್ಸಮಾನ (ಪಿಯುಸಿ ನಂತರ ಪದವಿಗೆ ಸಮನಾದ ಯಾವುದೇ ವಿದ್ಯಾರ್ಹತೆ) ಶಿಕ್ಷಣ ಪಾಸ್ ಮಾಡಿರಬೇಕು.
ಸೇವಾನಿರತ ಅಭ್ಯರ್ಥಿಗಳಿಗೆ ಅನುಭವ – ಪೊಲೀಸ್ ಇಲಾಖೆಯ ಯಾವುದೇ ವೃಂದದಲ್ಲಿ ಕನಿಷ್ಟ 5 ವರ್ಷ ಸೇವೆ ಸಲ್ಲಿಸಿರಬೇಕು.
ಅಭ್ಯರ್ಥಿಯ ಸಾಮಾನ್ಯ ಅರ್ಹತೆ
1. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು;
2. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
3.ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಎತ್ತರ – ಪುರುಷರಿಗೆ ಕನಿಷ್ಠ 163 ಸೆಂ.ಮೀ, ಮಹಿಳೆಯರಿಗೆ ಕನಿಷ್ಠ 153 ಸೆಂ.ಮೀ
ತೂಕ – ಪುರುಷರಿಗೆ ಕನಿಷ್ಠ 50 ಕೆ.ಜಿ ಮಹಿಳೆಯರಿಗೆ ಕನಿಷ್ಠ 45 ಕೆ.ಜಿ
ಎದೆ (ಪುರುಷರಿಗೆ) – ಕನಿಷ್ಠ 76 ಸೆಂ.ಮೀ
ಆಯ್ಕೆ ವಿಧಾನ – ಪದವಿಯಲ್ಲಿ ಪಡೆದಿರುವ ಅಂಕಗಳ ಆಧಾರದ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವೆಬ್ ಸೈಟ್ ವಿಳಾಸ – Petc.kar.nic.in
ಅರ್ಜಿ ಸಲ್ಲಿಸಲು – 31.08.2024
ಗಮನದಲ್ಲಿಡಬೇಕಾದ ಅಂಶ
– ಇಲಾಖಾ ವೆಬ್ ಸೈಟ್ ನಲ್ಲಿ ಕಾಲಕಾಲಕ್ಕೆ ನೀಡಲಾಗುವ ಮಾಹಿತಿಯು ಅಧಿಕೃತ ಹಾಗೂ ಅಂತಿಮವಾಗಿರುತ್ತದೆ.
– ಇಲಾಖಾವತಿಯಿಂದ ಪತ್ರ ವ್ಯವಹಾರವನ್ನು ಯಾವುದೇ ನಡೆಸಲಾಗುವುದಿಲ್ಲವಾದ್ದರಿಂದ, ಇಲಾಖಾ ವೆಬ್ ಸೈಟ್ ನ್ನು ಕಾಲಕಾಲಕ್ಕೆ ವೀಕ್ಷಿಸತಕ್ಕದ್ದು.
-ತಪ್ಪು ಮಾಹಿತಿಯ ಕಾರಣದಿಂದ ಊಂಟಾಗಬಹುದಾದ ಲೋಪಗಳಿಗೆ ಸಂಬಂಧಪಟ್ಟ ಅಭ್ಯರ್ಥಿಗಳೇ ಜವಾಬ್ದಾರರಾಗಿರುತ್ತಾರೆ.
ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 5 ಲಕ್ಷ ರೂ.ವರೆಗೆ ಸಾಲ!