ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲೆಯ ಪರಿಶಿಷ್ಟ ಪಂಗಡದವರಿಗೆ ಪಾಲಿಮನೆ ನಿರ್ಮಿಸಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆ.30 ರಿಂದ ಆಯಾ ತಾಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆ.21 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಗಳನ್ನು ಸಂಪರ್ಕಿಸುವುದು.
ಶ್ರೀ ಮಹರ್ಷಿ ವಾಲ್ಮಿಕಿ ಪ್ರಶಸ್ತಿ ಅರ್ಜಿ ಆಹ್ವಾನ
2024-25 ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿರವರ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶ್ರೀ ಮಹರ್ಷಿ ವಾಲ್ಮಿಕಿ ಭವನ ಕಂಟ್ರಿ ಕ್ಲಬ್ ರಸ್ತೆ ವಿದ್ಯಾನಗರ, ಶಿವಮೊಗ್ಗ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆ.17 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ದಾವಣಗೆರೆಯಲ್ಲಿ ಜೈಲು ಶಿಕ್ಷೆಯ ಭಯದಿಂದ ‘ಕೋರ್ಟ್’ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ