ಬೆಂಗಳೂರು: ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೇ.50ರಷ್ಟು ಸಬ್ಸಿಡಿ ದರದಲ್ಲಿ 1 ಲಕ್ಷದವರೆಗೆ ಸಾಲಸೌಲಭ್ಯಕ್ಕಾಗಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ.
ಘಟಕ ವೆಚ್ಚವಾಗಿ 1 ಲಕ್ಷವನ್ನು ನೀಡಲಾಗುತ್ತದೆ. ಇದರಲ್ಲಿ ಸಹಾಯಧನ 50,000 ಆಗಿದ್ದರೇ, ಸಾಲ 50,000ಕ್ಕೆ ಶೇ.4ರಷ್ಟು ಬಡ್ಡಿದರವಾಗಿದೆ. ಪರಿಶಿಷ್ಟ ಪಂಗಡದವರು ಅರ್ಜಿಯನ್ನು ಅಕ್ಟೋಬರ್.23ರಿಂದ ನವೆಂಬರ್.23ರವರೆಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಮೂಲಕ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9482300400ಗೆ ಕರೆ ಮಾಡಿ ಪಡೆಯಬಹುದಾಗಿದೆ.
ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ.
2024 – 25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ… pic.twitter.com/thWBkTOMYc
— DIPR Karnataka (@KarnatakaVarthe) October 16, 2024
BREAKING ; ದೇಶದ ರೈತರಿಗೆ ದೀಪಾವಳಿ ಗಿಫ್ಟ್ ; ಹಿಂಗಾರು ಬೆಳೆಗಳ ‘ಕನಿಷ್ಠ ಬೆಂಬಲ ಬೆಲೆ’ ಹೆಚ್ಚಳ |MSP Hike
BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಗ್ನಿ ಅವಘಡ : ಸುಟ್ಟು ಕರಕಲಾದ ಚಪ್ಪಲಿ ಶೋರೂಂ!