ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳ ಒಂದು ಶನಿವಾರದಂದು ಬ್ಯಾಗ್ ರಹಿತ ದಿನವನ್ನಾಗಿ ( Bagless Day ) ಆಚರಿಸುವಂತೆ ಘೋಷಣೆ ಮಾಡಲಾಗಿತ್ತು. ಇದೀಗ ಮುಂದುವರೆದು ಈ ಬ್ಯಾಗ್ ರಹಿತ ದಿನದ ಆಚರಣೆ ಸಂಬಂಧ ಶಾಲಾ ಶಿಕ್ಷಕರಿಗೆ ( School Teacher ) ಅನುಕೂಲವಾಗುವ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಈ ಕುರಿತಂತೆ ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳು ಒಂದು ಶನಿವಾರದಂದು ಸಂಭ್ರಮ ಶನಿವಾರ – ಬ್ಯಾಗ್ ರಹಿತ ದಿನವನ್ನು ಆಚರಿಸಲು ಸೂಚಿಸಲಾಗಿದೆ ಎಂದಿದ್ದಾರೆ.
ಬೆಂಗಳೂರಿನ ಏರ್ ಪೋರ್ಟ್ ಫ್ಲೈ ಓವರ್ ನಲ್ಲಿ ಭೀಕರ ಅಪಘಾತ : ಇಬ್ಬರು ಬೈಕ್ ಸವಾರರ ದುರ್ಮರಣ
ಇನ್ನೂ ಬ್ಯಾಗ್ ರಹಿತ ದಿದಂದು ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗಾಗಿ ವಿವಿಧ 10 ವಿಷಯಗಳಲ್ಲಿ ಸ್ವಯಂ ವಿವರಣಾತ್ಮಕ ಚಿತ್ರ ಸಹಿತ ಚಟುವಟಿಕೆ ಪುಸ್ತಕಗಳನ್ನು ಹಾಗೂ ಅವುಗಳನ್ನು ತರಗತಿಗಳಲ್ಲಿ ನಿರ್ವಹಿಸಲು ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ ಎಂದಿದ್ದಾರೆ.
BIG NEWS: ‘KSRTC ಬಸ್ ಲಗೇಜ್ ನಿಯಮ’ ಪರಿಷ್ಕರಣೆ: ಇನ್ಮುಂದೆ 30 ಕೆಜಿ ವರೆಗೆ ಉಚಿತ, ನಾಯಿಗೆ ಅರ್ಧ ಟಿಕೆಟ್
ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಎಲ್ಲಾ ಶಿಕ್ಷಕರು ಕೈಪಿಡಿಯನ್ನು DSERT ವೆಬ್ ಸೈಟ್ https://dsert.kar.nic.in ಜಾಲತಾಣಕ್ಕೆ ಭೇಟಿ ನೀಡಿ, ಡೌನ್ ಲೋಡ್ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.
ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರ: ಕಾನೂನು ತಜ್ಞರ ಮೊರೆ ಹೋಗ ರಾಜ್ಯ ಸರ್ಕಾರ