ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ವಿದ್ಯಾರ್ಥಿಗಳಿಗೆ ಪೌಷ್ಠಿಕತೆ ಹೆಚ್ಚಿಸಲು ವಾರವಿಡೀ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಅವರು, ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆಗೆ ರಜಾ ದಿನ ಹೊರತುಪಡಿಸಿ, ವಾರದ 6 ದಿನವೂ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
ಈ ಮೊದಲು ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ವಾರಕ್ಕೊಮ್ಮೆ ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು 10ನೇ ತರಗತಿಯವರೆಗೆ ವಿಸ್ತರಿಸಿದೆ. ವಾರದಲ್ಲಿ ಒಂದು ದಿನದ ಬದಲು ಎರಡು ದಿನಕ್ಕೆ ಹೆಚ್ಚಿಸಲಾಗಿತ್ತು. ಇನ್ನು ವಾರವಿಡೀ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
BREAKING: ಕಾವೇರಿ ನದಿ ನೀರು ಹಂಚಿಕೆ ವಿಚಾರ: ಜು.14ರಂದು ಸರ್ವಪಕ್ಷಗಳ ಸಭೆ ಕರೆದ ಸಿಎಂ ಸಿದ್ಧರಾಮಯ್ಯ
BREAKING: ‘ಅಗಲಿದ ಅಪರ್ಣಾ’ ಪಂಚಭೂತಗಳಲ್ಲಿ ಲೀನ: ‘ಅಚ್ಚಕನ್ನಡ ನಿರೂಪಕಿ’ ಇನ್ನೂ ‘ನೆನಪು’ ಮಾತ್ರ | Anchor Aparna