ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ್ ಯೋಜನೆಯ ಮಧ್ಯಾಹ್ನ ಉಪಹಾರ ( Mid Day Meals ) ಯೋಜನೆಯಡಿ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಮೊಟ್ಟೆ ಅಥವಾ ಬಾಳೆಹಣ್ಣು, ಚಿಕ್ಕಿಯನ್ನು ವಿತರಿಸಲು ಆದೇಶಿಸಿದೆ.
BIG NEWS: ‘KRS ಜಲಾಶಯ’ಕ್ಕೆ ಬಾಗಿನ ಅರ್ಪಿಸಿದ ‘ಸಿಎಂ ಬಸವರಾಜ ಬೊಮ್ಮಾಯಿ’
ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದಾರೆ. 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ್ ಯೋಜನೆಯ ಮಧ್ಯಾಹ್ನದ ಉಪಹಾರ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1 ರಿಂದ 8ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ಫಲಾನುಭವಿ ವಿದ್ಯಾರ್ಥಿಗಳಿಗೆ ಪ್ರತಿ ವಿದ್ಯಾರ್ಥಿಗೆ ಒಂದು ದಿನ ಘಟಕ ವೆಟ್ಟ ರೂ.6ರಂತೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣು, ಚಿಕ್ಕಿಯನ್ನು ವಿತರಿಸಲು ಅನುಮತಿ ನೀಡಿ ಆದೇಶಿಸಿದ್ದಾರೆ.
BREAKING NEWS: ಮೇಕೆದಾಟು ಅಣೆಕಟ್ಟು ಯೋಜನೆ; ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆ ಜು. 26 ಮುಂದೂಡಿಕೆ
ಅಂದಹಾಗೇ ಬೀದರ್, ಬಳ್ಳಾರಿ, ವಿಜಯನಗರ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯಲ್ಲಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿಯನ್ನು ವಿತರಿಸಲು ಮುಂದಿನ ತ್ರೈಮಾಸಿಕ ಅವಧಿಗೆ ಬಿಡುಗಡೆ ಮಾಡುವ ಅನುದಾನದಿಂದ ಮಾತ್ರ ಭರಿಸಬೇಕು ಎಂದು ತಿಳಿಸಿದೆ.
ಉತ್ತಮ ಗುಣಮಟ್ಟದಿಂದ ಕೂಡಿರುವ ಮೊಟ್ಟೆ ಅಥವಾ ಬಾಳೆಹಣ್ಣು, ಚಿಕ್ಕಿಯನ್ನು ಪರಿಶೀಲಿಸಿ ಖಾತ್ರಿಪಡಿಸಿಕೊಂಡು ಖರೀದಿಸಬೇಕು. ಜೊತೆಗೆ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ವಿತರಿಸಬೇಕು. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರತ್ಯೇಕವಾದ ಮಾರ್ಗಸೂಚಿಯನ್ನು ಹೊರಡಿಸುವಂತೆ ಸೂಚಿಸಿದೆ.
ವರದಿ : ವಸಂತ ಬಿ ಈಶ್ವರಗೆರೆ